ನಾನು ಗೆದ್ದರೆ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತೇನೆ: ‘ಹಿಂದಿ ಬರೊಲ್ಲ’ ಹೇಳಿಕೆಗೆ ಕೋಟ ತಿರುಗೇಟು!

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಕೋಟ ಶ್ರೀನಿವಾಸ ಪೂಜಾರಿಗೆ ಹಿಂದಿ ಬರೊಲ್ಲ’ ಎಂಬ ಜಯಪ್ರಕಾಶ್ ಹೆಗ್ಡೆ ಹೇಳಿಕೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ.

ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನನಗೆ ಹಿಂದಿ ಬರೊಲ್ಲ ಎಂದು ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ‌. ಹೆಗ್ಡೆಯವರು ನನ್ನ ಮೇಲಿನ ಅಭಿಮಾನ, ಪ್ರೀತಿಯಿಂದ ಮುಂದೆ ಮುಜುಗರ ಆಗಬಾರದು ಎಂಬ ದೃಷ್ಟಿಯಿಂದ ಹಾಗೆ ಹೇಳಿದ್ದಾರೆ ಎಂದರು.

ನಾನು ಹೆಗ್ಡೆಯವರಿಗೆ ಮನವಿ ಮಾಡುತ್ತೇನೆ. ಹೆಗ್ಡೆಯವರಿಗೆ ನನ್ನ ಮೇಲಿನ ಪ್ರೀತಿ ಅರ್ಥವಾಗಿದೆ. ನಾನು ಪ್ರಮಾಣವಚನವನ್ನು ಕನ್ನಡದಲ್ಲೆ ತೆಗೆದುಕೊಳ್ಳುತ್ತೇನೆ. ಸದನಕ್ಕೆ ಪ್ರವೇಶ ಮಾಡಿದ ಆರು ತಿಂಗಳಲ್ಲಿ ಹಿಂದಿ ಕಲಿಯುತ್ತೇನೆ. ಹೆಗ್ಡೆಯವರಿಗೆ ಸಮಾಧಾನ ಆಗುವಷ್ಟು ಹಿಂದಿಯಲ್ಲಿ ಭಾಷಣ ಮಾಡಿ ಬರುತ್ತೇನೆ ಎಂದು ಚಾಲೆಂಜ್ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!