ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಸಲ ಭಾರತ ವಿಶ್ವಕಪ್ ಗೆದ್ದೇ ಗೆಲ್ತಾರೆ. ಕಪ್ ನಮ್ಮದೇ ಎಂದ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ನಾಡಿದ್ದು ನಡೆಯಲಿರುವ ಭಾರತ-ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾನು ಬೆಂಗಳೂರಿನಲ್ಲಿ ಒಂದು ಪಂದ್ಯ ನೋಡಿದ್ದೆ. ನಾನು ರಾತ್ರಿ 9.30 ಮೇಲೆ ಮನೆಗೆ ಹೋಗುವುದು. ಸಮಯ ಸಿಕ್ಕಾಗ ನಾನು ಮನೆಯಲ್ಲಿ ಕ್ರಿಕೆಟ್ ನೋಡುತ್ತೇನೆ. ನ.19 ರಂದು ನಡೆಯಲಿರುವ ಫೈನಲ್ ಪಂದ್ಯವನ್ನ ವೀಕ್ಷಣೆ ಮಾಡುತ್ತೇನೆ. ಭಾರತ ತಂಡದ ಎಲ್ಲಾ ಆಟಗಾರರು ಚೆನ್ನಾಗಿ ಆಟವಾಡ್ತಿದ್ದಾರೆ. ಇದೇ ರೀತಿ ಎಲ್ಲರೂ ಒಗ್ಗೂಡಿ ಹೋರಾಡಿದರೆ ಗೆಲ್ತಾರೆ.ಭಾರತ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ವಿಶ್ವಾಸ ಇದೆ. ಟೀಂ ಆಗಿ ಆಟವಾಡಿದರೆ ಗೆಲುವು ಸಾಧ್ಯ. ಎಲ್ಲರೂ ಒಗ್ಗೂಡಿ ಉತ್ತಮ ಪ್ರದರ್ಶನ ನೀಡಿದರೆ ಗೆಲುವು ನಿಶ್ಚಿತ ಎಂದರು.