ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್ ನಾಯಕತ್ವದ ಬಗ್ಗೆ ಜಿಟಿ ದೇವೇಗೌಡ ಅವರು ಕಟುವಾಗಿ ಮಾತನಾಡಿದ್ದು, ಇತ್ತೀಚೆಗೆ ಸಿಎಂ ಇಬ್ರಾಹಿಂ ಅವರನ್ನು ಭೇಟಿ ಮಾಡಿರುವುದು ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಪಕ್ಷದ ಮುಳುಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್, ಕುಮಾರಸ್ವಾಮಿ ಪಕ್ಷವನ್ನು ಹಾಳು ಮಾಡುತ್ತಿದ್ದಾರೆ ಎಂದು ಜಿಟಿ ದೇವೇಗೌಡರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ, ಆದರೆ ಜೆಡಿಎಸ್ ಪಕ್ಷವನ್ನು ಮಾರುವ ಪ್ರಯತ್ನಗಳು ನಡೆದರೆ ನಮ್ಮ ದಾರಿ ನಾವು ನೋಡಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.