ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಪ್ರಕರಣ ಹೊಸ ತಿರುವು ಪಡೆದುಕೊಳ್ಳುತ್ತಿದೆ.
ಪೊಲೀಸರ ಅನ್ಯಾಯ ವಿರುದ್ಧ ನೊಂದ ಸಚಿನ್ ಕುಟುಂಬವು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆಯಲು ಮುಂದಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿನ್ ಪಾಂಚಾಳ್ ಅವರ ಸಹೋದರಿ ಸುರೇಖಾ ಅವರು, ಈ ಪ್ರಕರಣವನ್ನು ಸಿಐಡಿ, ಸಿಬಿಐ ಸೇರಿದಂತೆ ಯಾವುದಾದರೂ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲಿ. ನಮ್ಮ ತಮ್ಮನ ಸಾವಿಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.
ಈಗಾಗಲೇ ತನಿಖೆಯನ್ನು ವಿಳಂಭ ಮಾಡುತ್ತಿರುವುದು ಬೇಸರ ತಂದಿದೆ. ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.