ರೈತರ ಪಂಪ್ ಸೆಟ್‌ಗಳಿಗೆ ಮೀಟರ ಅಳವಡಿಕೆ ಮಾಡಿದರೆ ನಾವೇ ಸರ್ಕಾರದಲ್ಲಿ ಇರುವುದಿಲ್ಲ: ಸಚಿವ ಪಾಟೀಲ್

ಹೊಸದಿಗಂತ ವರದಿ, ಹಾವೇರಿ:

ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ ಮಾಡಿದರೆ. ರೈತರ ಪಂಪ್ ಸೆಟ್‌ಗಳಿಗೆ ಮೀಟರ ಅಳವಡಿಕೆ ಮಾಡಿದರೆ ನಾವೇ ಸರ್ಕಾರದಲ್ಲಿ ಇರುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಎದಿರುವ ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಆಗ್ರಹಿಸಿ ರೈತ ಸಂಘಟನೆಯವರು ನಡೆಸುತ್ತಿರುವ ಅನಿರ್ಧಿಷ್ಟಾವಧಿಯ ಅಹೋ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರ ಪ್ರಶ್ನೆಯೊಂದಕ್ಕೆ ಪ್ರತಿಕ್ರೀಯಿಸಿದ ಸಂದರ್ಭದಲ್ಲಿ ಕೃಷಿ ಸಚಿವರು ಮೇಲಿನಂತೆ ಹೇಳಿದರು.
ಪ್ರಸ್ತುತ ಸ್ಥಿತಿಯಲ್ಲಿ ವಿದ್ಯುತ್ ಉಚಿತವಾಗಿ ನೀಡಿದರನೇ ಕೃಷಿಯಲ್ಲಿ ಉತ್ಪನ್ನ ತಗೆದರೂ ಅದರಿಂದ ಲಾಭವನ್ನು ಮಾಡಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ. ಇನ್ನು ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ ಅಳವಡಿಕೆ ಮಾಡಿದರೆ ಪ್ರತಿ ವರ್ಷ ಸಾವಿರಾರೂ ಬಿಲ್ ಬರುತ್ತದೆ ಇದರಿಂದ ಬಹುತೇಕ ರೈತರು ನೀರಾವರಿ ಸೌಲಭ್ಯದಿಂದ ಕೃಷಿ ಮಾಡುವುದನ್ನು ಬಿಡಬೇಕಾಗುತ್ತದೆ. ಸಚಿವರಾಗಿ ಈ ಕುರಿತು ನೀವು ಮುಖ್ಯಮಂತ್ರಿಗಳೊಂದಿಗೆ ಮಾತನಾಡುವಂತೆ ರೈತ ಮುಖಂಡರು ಆಗ್ರಹಿಸಿದಾಗಲೂ ಸಚಿವ ಬಿ.ಸಿ.ಪಿ ಅವರ ಉತ್ತರ ಮೇಲಿನಂತೆನೇ ಆಗಿತ್ತು.
೨೦೧೫-೧೬ರಲ್ಲಿನ ಬೆಳೆ ಹಾನಿ ಪರಿಹಾರವನ್ನು ಇಂದಿನವರೆಗೂ ನೀಡಿಲ್ಲ ಈ ಕುರಿತು ಸರ್ಕಾರ ಕ್ರಮ ಕೈಗೊಲ್ಲಬೇಕು. ತಲಾಟಿಯವರು ಮಾಡಿದ ತಪ್ಪಿಗೆ ೭ ವರ್ಷಗಳಾದರೂ ಪರಿಹಾರ ಬಂದಿಲ್ಲ ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿ ಎಂದರು.
ಇಗಾಗಲೆ ೧.೧೭ ಲಕ್ಷ ಹೆಕ್ಟೇರ ಮೆಕ್ಕೆಜೋಳ ಬೆಳೆ ಹಾನಿಗೆ ಮಧ್ಯಂತರ ಪರಿಹಾರವನ್ನು ನೀಡಲಾಗಿದೆ. ಇತರ ಬೆಳೆಗಳ ಹಾನಿ ಪರಿಹಾರಕ್ಕೆ ೪೨ ಸಾವಿರ ಅರ್ಜಿಗಳು ಬಂದಿವೆ. ಈ ಬೆಳೆಗಳಿಗೆ ಸ್ಥಳೀಯ ಗಂಡಾಂತರ ಯೋಜನೆಯಲ್ಲಿ ಪರಿಹಾರ ನೀಡುವುದಕ್ಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ತಿಳಿಸಿದರು.
ಕುರಿ ಸತ್ತರೆ ೫ ಸಾವಿರ ಪರಿಹಾರವನನು ನೀಡಲಾಗುತ್ತಿದೆ. ಆದರೆ ಎತ್ತು ಮತ್ತು ಜಾನುವಾರುಗಲು ಅಸುನೀಗಿದರೆ ಏಕೆ ಪರಿಹಾರವನ್ನು ನೀಡುತ್ತಿಲ್ಲ ಎಂದು ರೈತರು ಸಚಿವರನ್ನು ಪ್ರಶ್ನಿಸಿದರು. ಈ ಕುರಿತು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದರು.
ತುಂಗಭದ್ರಾ ಕಾಲುವೆ ನಿರ್ಮಾಣಕ್ಕೆ ಭೂಮಿಯನ್ನು ಕಳೆದುಕೊಂಡ ರೈತರಲ್ಲಿ ಎಷ್ಟು ಜನ ಉಳಿದುಕೊಂಡಿದ್ದಾರೆ ಎನ್ನುವ ಮಾಹಿತಿಯನ್ನು ನೀಡಿದರೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ನೀಡುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಿಸಿಪಿ ರೈತರಿಗೆ ತಿಳಿಸಿದರು.
೨೦೧೫-೧೬ ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಕ್ಕೆ ಪ್ರತಿಭಟನೆಯನ್ನು ನಿಲ್ಲಿಸಿ ಬೆಂಗಳೂರಿಗೆ ಬರುವಂತೆ ಸಚಿವ ಬಿಸಿಪಿ ರೈತ ಮುಖಂಡರಿಗೆ ಹೇಳಿದರು.
ನಾವು ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಮುಖ್ಯಮಂತ್ರಿಗಳೊಂದಿಗೆ ನೀವೇ ಚರ್ಚಿಸಿ ಒಳ್ಳೆಯ ಸುದ್ದಿಯನ್ನು(ಬೇಡಿಕೆಗಳು ಇಡೇರಿರುವ ಸುದ್ದಿಯನ್ನು) ಹೇಳಿದರೆ ನಾವು ಪ್ರತಿಭಟನೆಯನ್ನು ಹಿಂದೆ ಪಡೆದುಕೊಳ್ಳುತ್ತೇವೆ. ಬೇಡಿಕೆಗಳಿ ಇಡೇರುವವರೆಗೂ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ ರೈತ ಮುಖಂಡರು ಸಚಿವರಿಗೆ ತಿಳಿಸಿದರು. ಇದಕ್ಕೆ ಎಲ್ಲ ರೈತರು ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಗುತ್ತೂರ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ರೈತ ಮುಖಂಡರಾದ ರಾಮಣ್ಣ ಕೆಂಚಳ್ಳೇರ, ಮಲ್ಲಿಕಾರ್ಜುನ ಬಳ್ಳಾರಿ ಸೇರಿದಂತೆ ಅನೇಕರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!