ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಕ್ಸಿಟ್ ಪೋಲ್ ಗಳು ಈ ಬಾರಿಯ ಲೋಕ ಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಮುನ್ಸೂಚನೆ ನೀಡಿದ್ದು, ಆದ್ರೆ ಆಮ್ ಆದ್ಮಿ ಪಕ್ಷದ ನಾಯಕ ಸೋಮನಾಥ್ ಭಾರ್ತಿ, ಜೂನ್ 4ರಂದು ಎಲ್ಲಾ ಸಮೀಕ್ಷೆ ಉಲ್ಟಾ ಆಗಲಿದೆ ಎಂದಿದ್ದಾರೆ.
ಒಂದು ವೇಳೆ ಮೋದಿ ಮೂರನೇ ಬಾರಿಗೆ ಪ್ರಧಾನಿ ಆದರೆ ತಲೆ ಬೋಳಿಸಿಕೊಳ್ಳುತ್ತೇನೆ. ನರೇಂದ್ರ ಮೋದಿ ಪ್ರಧಾನಿಯಾಗುವುದಿಲ್ಲ, ದೆಹಲಿಯ ಎಲ್ಲಾ 7 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂದು ಸವಾಲು ಹಾಕಿದ್ದಾರೆ.
ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ನಾನು ನನ್ನ ತಲೆಯನ್ನು ಬೋಳಿಸಿಕೊಳ್ಳುತ್ತೇನೆ. ನನ್ನ ಮಾತನ್ನು ಗಮನಿಸಿ! ಜೂನ್ 4 ರಂದು ಎಲ್ಲಾ ಎಕ್ಸಿಟ್ ಪೋಲ್‌ಗಳು ತಪ್ಪಾಗುತ್ತವೆ ಮತ್ತು ಮೂರನೇ ಬಾರಿಗೆ ಮೋದಿ ಜಿ ಪ್ರಧಾನಿಯಾಗುವುದಿಲ್ಲ. ದೆಹಲಿಯ ಎಲ್ಲಾ 7 ಸೀಟುಗಳು ಇಂಡಿಯಾ ಮೈತ್ರಿಕೂಟ ಪಾಲಾಗುತ್ತವೆ, ಆದ್ದರಿಂದ ನಾವು ಜೂನ್ 4 ರಂದು ನೀಡಲಾಗುವ ನಿಜವಾದ ಫಲಿತಾಂಶಗಳಿಗಾಗಿ ಕಾಯಬೇಕಾಗಿದೆ. ಜನ ಬಿಜೆಪಿ ವಿರುದ್ಧ ಭಾರಿ ಮತ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.