ಪ್ರವಾದಿ ಇಂದು ಬದುಕಿದ್ದರೆ, ಮುಸ್ಲಿಂ ಮತಾಂಧತೆ ನೋಡಿ ಆಘಾತಕ್ಕೊಳಗಾಗುತ್ತಿದ್ದರು-ತಸ್ಲೀಮಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರವಾದಿ ಮೊಹಮದ್‌ ವಿರುದ್ಧ ಹೇಳಿಕೆ ನೀಡಿರುವ ನೂಪುರ್‌ ಶರ್ಮಾ ಹಾಗೂ ನವೀನ್‌ ಜಿಂದಾಲ್‌ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಬಾಂಗ್ಲಾದೇಶದ ಲೇಖಕಿ ತಸ್ಲೀಮಾ ನಸ್ರೀನ್ ಕೆಂಡಾಮಂಡಲರಾಗಿದ್ದಾರೆ. ದೇಶಾದ್ಯಂತ ಭುಗಿಲೆದ್ದಿರುವ ಹಿಂಸಾತ್ಮಕ ಪ್ರತಿಭಟನೆಗಳನ್ನು ತಮ್ಮ ಟ್ವಿಟ್ಟರ್‌ ಖಾತೆ ಮೂಲಕ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ತಸ್ಲೀಮಾ, “ಪ್ರವಾದಿ ಮೊಹಮ್ಮದ್ ಇಂದು ಜೀವಂತವಾಗಿದ್ದರೆ, ಪ್ರಪಂಚದಾದ್ಯಂತದ ಹರಡಿರುವ ಮುಸ್ಲಿಂ ಮತಾಂಧರ ಹುಚ್ಚುತನವನ್ನು ನೋಡಿ ಅವರು ಆಘಾತಕ್ಕೊಳಗಾಗುತ್ತಿದ್ದರು” ಎಂದು ವ್ಯಾಖ್ಯಾನಿಸಿದ್ದಾರೆ.

ನೂಪುರ್ ಶರ್ಮಾ ಅವರ ಹೇಳಿಕೆಯನ್ನು ವಿರೋಧಿಸಿ ದೆಹಲಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ ಸೇರಿದಂತೆ ದೇಶದ ಇತರ ಭಾಗಗಳಲ್ಲಿ ಮುಸ್ಲಿಮರು ನಿನ್ನೆ ದೊಡ್ಡ ಪ್ರಮಾಣದ ಪ್ರತಿಭಟನೆಗಳನ್ನು ನಡೆಸಿದರು. ನೂಪುರ್ ಶರ್ಮಾ ಅವರನ್ನು ಬಂಧಿಸಿ  ಗಲ್ಲು ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು. ಈ ಕ್ರಮದಲ್ಲಿ ತಸ್ಲೀಮಾ ನಸ್ರೀನ್ ಈ ರೀತಿ ಹೇಳಿಕೆ ನೀಡಿರುವುದು ಗಮನಾರ್ಹ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!