ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್‌ಜೆಡಿ ಆಳ್ವಿಕೆಯಲ್ಲಿ ಬಿಹಾರದಲ್ಲಿ ಕೇವಲ ಒಂದು ಉದ್ಯಮಮಾತ್ರ ಪ್ರವರ್ಧಮಾನಕ್ಕೆ ಬಂದಿತು ಅದುವೇ ಅಪಹರಣ, ಸುಲಿಗೆ, ಸುಪಾರಿ ಹತ್ಯೆಗಳು ಮತ್ತು ಡಕಾಯಿತಿ ಎಂದು ಲಾಲು ಪ್ರಸಾದ್ ನೇತೃತ್ವದ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ನಳಂದ ಜಿಲ್ಲೆಯ ಬಿಹಾರ್‌ಶರೀಫ್‌ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಆರ್‌ಜೆಡಿ ಆಳ್ವಿಕೆಯಲ್ಲಿ ರಾಜ್ಯದಲ್ಲಿ ಎಲ್ಲಾ ಕೈಗಾರಿಕಾ ಘಟಕಗಳು ಮುಚ್ಚಲ್ಪಟ್ಟವು ಎಂದು ಹೇಳಿದರು.
ಎನ್‌ಡಿಎನ ಉತ್ತಮ ಆಡಳಿತದ ದಾಖಲೆಯು ಬಿಹಾರದಲ್ಲಿ ಮತದಾನದ ಹಂತಗಳನ್ನು ಈಗಾಗಲೇ ಕಡಿಮೆ ಮಾಡಿದೆ. ಎನ್‌ಡಿಎ ಮತ್ತೆ ಅಧಿಕಾರಕ್ಕೆ ಮರಳಿದರೆ ಮುಂದೆ ಬಿಹಾರದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಸಬಹುದು ಎಂದು ಶಾ ಹೇಳಿದರು.
ಇದೇ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಶ್ಲಾಘಿಸಿದ ಶಾ, ಅವರ ನಾಯಕತ್ವದಲ್ಲಿ ಎನ್‌ಡಿಎ ರಾಜ್ಯವನ್ನು ‘ಜಂಗಲ್ ರಾಜ್’ ಮತ್ತು ನಕ್ಸಲಿಸಂನ ಪಿಡುಗಿನಿಂದ ಮುಕ್ತಗೊಳಿಸಿದೆ ಎಂದರು.

