ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಎನ್ಆರ್ಸಿ ಜಾರಿಯಾದರೆ ಬಂಗಾಳ ಮಾತ್ರವಲ್ಲ ಇಡೀ ಭಾರತಕ್ಕೆ ಬೆಂಕಿ ಇಡುತ್ತೇವೆ ಎಂದು ಪಾಕಿಸ್ತಾನದ ಲಷ್ಕರ್ ಇ ತೈಬಾ ಉಗ್ರ ಸಂಘಟನೆ ಬೆದರಿಕೆ ನೀಡಿದೆ.
ದೇಶದಲ್ಲಿ ಎನ್ಆರ್ಸಿ ಜಾರಿ ಮಾತುಗಳು ಚರ್ಚೆಯಾಗುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿದ್ದು, ಉಗ್ರ ಸಂಘಟನೆ ಕೇಂದ್ರ ಸಚಿವ ಶಂತನು ಠಾಕೂರ್ಗೆ ಬೆದರಿಕೆ ಪತ್ರ ರವಾನಿಸಿದೆ. ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮ್ ಸಮುದಾಯಕ್ಕೆ ತೊಂದರೆ ಕೊಟ್ಟರೆ ಲಷ್ಕರ್ ಪ್ರತೀಕಾರ ತೀರಿಸಲಿದೆ. ಬಂಗಾಳ ಮಾತ್ರವಲ್ಲ, ಇಡೀ ದೇಶವನ್ನೇ ಉರಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇತ್ತೀಚೆಗಷ್ಟೇ ಟಿಎಂಸಿ ನಾಯಕರಿಗೆ ನೇರ ಸವಾಲು ಹಾಕಿದ್ದ ಶಂತನು ಠಾಕೂರ್, ಗೂಂಡಾಗಳಂತೆ ವರ್ತಿಸುವ ಟಿಎಂಸಿ ಕಾರ್ಯಕರ್ತರಿಗೆ ಪೌರತ್ವ ನೀಡುವುದಿಲ್ಲ ಎಂದಿದ್ದರು. ಈ ಹೇಳಿಕೆ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಹೊಸ ಬೆಳವಣಿಗೆ ನಡೆದಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ