ಹೊಸದಿಗಂತ ಹುಬ್ಬಳ್ಳಿ:
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ನ್ಯಾಯಾಲಯದಲ್ಲಿ ಅನುಮತಿ ನೀಡಿದರೆ ಮಾತ್ರ ಹಿಂಪಡೆಯಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲ ಸರ್ಕಾರದ ಅವಧಿಯಲ್ಲಿಯೂ ಸುಳ್ಳು, ಉದ್ದೇಶ ಪೂರ್ವಕ ಹಾಗೂ ಹೋರಾಟಗಾರರ ಮೇಲೆ ಹಾಕಿರುವ ಪ್ರಕರಣ ಹಿಂಪಡೆಯಲು ಸಂಚಿವ ಸಂಪುಟದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದರು.
ಅದೇ ರೀತಿ ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಸುಳ್ಳು ಎಂದು ದಾಖಲಿಸಿದ್ದಾರೆ ಎಂಬ ಕಾರಣಕ್ಕೆ ಸಂಚಿವ ಸಂಪುಟದಲ್ಲಿ ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಬಿಜೆಪಿ ಅವಧಿಯಲ್ಲಿ ಬಹುತೇಕ ಇಂತಹ ಪ್ರಕರಣ ಹಿಂಪಡೆದಿದ್ದಾರೆ. ಅಷ್ಟೇ ಅಲ್ಲದೇ ಬಿಜೆಪಿ ಅವರ ಮೇಲಿನ ಪ್ರಕರಣವನ್ನು ನಾವು ಈ ಸಚಿವ ಸಂಪುಟದಲ್ಲಿ ಹಿಂಪಡೆಯಲು ನಿರ್ಧರಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಭಯೋತ್ಪಾದಕ ಬೆಂಬಲಿತ ಪಕ್ಷ ಎಂಬ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ಪ್ರಹ್ಲಾದ ಜೋಶಿ ಅವರೇ ಭಯೋತ್ಪಾದಕ ಎಂದು ಆರೋಪಿಸಿದರು.