ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶ ಸುತ್ತಿ ಜನರ ಜ್ವಲಂತ ಸಮಸ್ಯೆ ಬಗೆಹರಿಸಿದ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಬೇಕು ಎಂದು ಜಿ.ಪರಮೇಶ್ವರ್ ಹೇಳಿದರು.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕರಾಗಬೇಕೆಂದು ನಾವೆಲ್ಲರೂ ಬಯಸುತ್ತೇವೆ. ಈ ಬಗ್ಗೆ I.N.D.I.A ಒಕ್ಕೂಟ ನಿರ್ಧರಿಸಲಿದೆ. ರಾಹುಲ್ ಗಾಂಧಿ ದೇಶಾದ್ಯಂತ ಪಾದಯಾತ್ರೆ ಮಾಡಿದ್ದಾರೆ. ಈ ಮೂಲಕ ಜನರ ಜ್ವಲಂತ ಸಮಸ್ಯೆಗಳನ್ನು ಎತ್ತಿದ್ದಾರೆ. ಹೀಗಾಗಿಯೇ ಅವರು ವಿರೋಧ ಪಕ್ಷದ ನಾಯಕರಾಗಬೇಕು ಎಂಬುದು ನಮ್ಮೆಲ್ಲರ ಆಸೆ. I.N.D.I.A ಒಕ್ಕೂಟ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ನೋಡೋಣ ಎಂದಿದ್ದಾರೆ.
ರಾಹುಲ್ ಗಾಂಧಿ ಮನೆಮಾತಾಗಿದ್ದರೂ ಭಾರತ ಒಕ್ಕೂಟದಲ್ಲಿ ವಿರೋಧ ಪಕ್ಷದ ನಾಯಕರಾಗಿ ಯಾರು ಹೊರಹೊಮ್ಮುತ್ತಾರೆ ಎಂಬ ಕುತೂಹಲ ಮೂಡಿದೆ.