ರಾಜಭವನ ಬಿಜೆಪಿ ಕಚೇರಿಯಾದರೆ ವಿಧಾನಸೌಧ ಕಾಂಗ್ರೆಸ್‌ ಕಚೇರಿ: ಆರ್ ಅಶೋಕ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜಭವನವನ್ನು ಬಿಜೆಪಿ ಕಚೇರಿ ಎಂದ ಡಿಕೆ ಶಿವಕುಮಾರ್ ಗೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ತಿರುಗೇಟು ನೀಡಿದ್ದು, ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ, ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎಂದು ನಾವು ಹೇಳುತ್ತೇವೆ ಎಂದು ಟೀಕಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಆಡಳಿತ ನಡೆಸುವವರೇ ಪ್ರತಿಭಟನೆ ಮಾಡುತ್ತಾರೆ ಎಂದರೆ ಸರ್ಕಾರ ವಿಫಲವಾಗಿದೆ ಎಂದರ್ಥ. ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಮಾಡಿಕೊಂಡು, ಅದರಂತೆ ಸರ್ಕಾರ ನಡೆಸಲಾಗುತ್ತಿದೆ ಎಂದರೆ ಅದನ್ನು ಒಪ್ಪಿಕೊಳ್ಳುತ್ತಾರಾ? ರಾಜಭವನ ಎಂದರೆ ಸಂವಿಧಾನದತ್ತ ಅಧಿಕಾರ. ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ, ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎಂದು ನಾವು ಹೇಳುತ್ತೇವೆ ಎಂದರು.

ರಾಜ್ಯಪಾಲರು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಿದ್ದಾರೆ. 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೀಗೆ ನಡೆದಿದೆ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ, ಜನಾರ್ದನ ರೆಡ್ಡಿ ಅವರ ವಿರುದ್ಧದ ತನಿಖೆಗೂ ಆಗಿನ ರಾಜ್ಯಪಾಲರು ಅನುಮತಿ ನೀಡಿದ್ದರು. ಆಗ ರಾಜಭವನ ಕಾಂಗ್ರೆಸ್‌ ಕಚೇರಿಯಾಗಿತ್ತೇ? ಕಾಂಗ್ರೆಸ್‌ ನಾಯಕರು ಕಿವಿಯ ಮೇಲೆ ಹೂ ಇಡುವುದನ್ನು ಬಿಟ್ಟು, ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಿ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಹಿಂದೆ ನಿಂತಿರುವ ಬಂಡೆಯನ್ನು ತಳ್ಳುವ ಶಕ್ತಿ ನಮಗಿಲ್ಲ. 136 ಶಾಸಕರಿದ್ದಾರೆ ಎಂದು ಅಹಂಕಾರದಿಂದ ಮೆರೆಯುವ ಕಾಂಗ್ರೆಸ್‌ ನಾಯಕರು, ಈ ಸರ್ಕಾರವನ್ನು ಬಿಜೆಪಿ ಬೀಳಿಸುತ್ತಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. 136 ಶಾಸಕರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಂಬಿಕೆ ಇಲ್ಲ ಎಂಬುದು ಈ ಮೂಲಕ ಕಂಡುಬಂದಿದೆ ಎಂದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!