ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಣ ಚಿತ್ರದ ಶೂಟಿಂಗ್ ಸೆಟ್ನಲ್ಲಿ ಅವಘಡ ಸಂಭವಿಸಿದ್ದು, ಸ್ಟಿಲ್ ಫೋಟೊಗ್ರಾಫರ್ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದೆ.
ರಾಜಾ ಚಿತ್ರದಲ್ಲಿ ಸ್ಟಿಲ್ ಫೋಟೊಗ್ರಫರ್ ಆಗಿದ್ದ ಪಳನಿ ಅವರ ತಲೆ ಮೇಲೆ ಕಬ್ಬಿಣದ ಕಂಬ ಬಿದ್ದಿದೆ.
ಶ್ರೇಯಸ್ ಮಂಜು ಅಭಿನಯದ ನಂದ ಕಿಶೋರ್ ನಿರ್ದೇಶನದ ರಾಣ ಚಿತ್ರದ ಚಿತ್ರೀಕರಣ ಮಿನರ್ವ ಮಿಲ್ನಲ್ಲಿ ನಡೆಯುತ್ತಿತ್ತು. ಈ ವೇಲೆ ಅಚಾನಕ್ ಆಗಿ ಕಬ್ಬಿಣದ ಕಂಬ ತಲೆ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಪಳನಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.