ಹಸುವಿನ ಕೆಚ್ಚಲು ಕೊಯ್ದ ನೀಚರನ್ನು ಬಂಧಿಸದಿದ್ದರೇ ಉಗ್ರ ಹೋರಾಟ ಖಂಡಿತ: ಮುತಾಲಿಕ್ ವಾರ್ನಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಬೆಳಗ್ಗೆ ಚಾಮರಾಜಪೇಟೆಯ ಒಬ್ಬನ ಮಾಲೀಕತ್ವದಲ್ಲಿ ಇದ್ದ ನಾಲ್ಕು ಹಸುವಿನ ಕೆಚ್ಚಲು ಕೊಯ್ದಿದ್ದಾರೆ. ಇದು ನೀಚ ಕೃತ. ಇಸ್ಲಾಮಿಕ್ ಶಕ್ತಿಯ ಪ್ರದರ್ಶನ ಆಗುತ್ತಿದೆ, ರಾಕ್ಷಸ ಕೃತ್ಯಕ್ಕೆ ಇದು ಉದಾಹರಣೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮೀರ್ ಅಹ್ಮದ್ ಇದು ನಿಮ್ಮ ಕ್ಷೇತ್ರದಲ್ಲಿ ಆಗಿದೆ. ಇದನ್ನು ತಾವು ಗಂಭೀರವಾಗಿ ತೆಗೆದುಕೊಳ್ಳಬೇಕು. ಹಸು ಹಿಂದೂಗಳಿಗೆ ಅತ್ಯಂತ ಪೂಜ್ಯ ಪ್ರಾಣಿ. ಅದರ ಕೆಚ್ಚಲು ಕೊಯ್ದ ನೀಚರನ್ನು ಒದ್ದು ಒಳಗಡೆ ಹಾಕದಿದ್ದರೇ ಶ್ರೀರಾಮ ಸೇನೆಯಿಂದ ಜಮೀರ್ ವಿರುದ್ಧ ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ, ಇದು ಎಚ್ಚರಿಕೆ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!