ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ, ಕ್ಷೇತ್ರ ತ್ಯಾಗಕ್ಕೆ ಸಿದ್ಧ: ಹಿಟ್ನಾಳ್

ಹೊಸದಿಗಂತ ವರದಿ ಕೊಪ್ಪಳ:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಕೊಪ್ಪಳದಿಂದ ಸ್ಪರ್ಧಿಸಿದರೆ, ಕ್ಷೇತ್ರ ಬಿಟ್ಟುಕೊಡಲು ಸಿದ್ಧನಿದ್ದೇನೆ ಎಂದು‌ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲಿಸುವ ಮನೋಭಾವ ಕಾರ್ಯಕರ್ತರಲ್ಲಿದೆ. ಎಲ್ಲಿ ಸ್ಪರ್ಧಿಸಿದರೂ ಗೆಲ್ಲುತ್ತಾರೆ. ರಾಜ್ಯದ ಮಾಸ್ ಲೀಡರ್ ಆಗಿದ್ದಾರೆ. ಅವರನ್ನು ಭಾರೀ ಅಂತರದಲ್ಲಿ ಗೆಲ್ಲಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಹಿಂದೆ ಕೊಪ್ಪಳ ಲೋಕಸಭೆಗೆ ಸ್ಪರ್ಧೆ ಮಾಡಿದ್ದರು. ಸ್ವಲ್ಪ ಅಂತರದಲ್ಲಿ ಸೋತಿದ್ದರು. ಈಗ ನಮ್ಮ ಕ್ಷೇತ್ರದಿಂದ ಗೆಲ್ಲಿಸಿಕೊಂಡು ಬರುತ್ತೇವೆ. ಕ್ಷೇತ್ರಕ್ಕೆ ಬರಲು ನಾವು ಒತ್ತಾಯ ಮಾಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಂದಿನ ದಿನಗಳಲ್ಲಿ ಟ್ರ್ಯಾಕ್ಟರ್ ರ‌್ಯಾಲಿ ನಡೆಸಲಾಗುವುದು ಎಂದರು.

ಶಾಸಕ ಅಮರೇಗೌಡ ಬಯ್ಯಾಪುರ ಮಾತನಾಡಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜಿಲ್ಲೆಯ ಯಾವ ಕ್ಷೇತ್ರಕ್ಕೂ ಬಂದರೂ, ತ್ಯಾಗ ಮಾಡಲು ಸಿದ್ದರಿದ್ದೇವೆ. ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೆ ನಾನು ಕ್ಷೇತ್ರ ಬಿಟ್ಟುಕೊಡಲು ಸಿದ್ಧನಿದ್ದೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!