ಸಿದ್ದರಾಮಯ್ಯನವರಿಗೆ ಧಮ್ ಇದ್ದರೆ ಹಿಂದು ರಾಷ್ಟ್ರ ಆಗುವುದನ್ನು ತಡೆಯಲಿ: ಸಂಸದ ಅನಂತ್ ಕುಮಾರ್ ಹೆಗ್ಡೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಸಿದ್ದರಾಮಯ್ಯನವರಿಗೆ ಧಮ್ ಇದ್ದರೆ ಹಿಂದು ರಾಷ್ಟ್ರ ಆಗುವುದನ್ನು ತಡೆಯಲಿ ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿದ್ದರಾಮಯ್ಯ ಸರ್ಕಾರ ಹುಚ್ಚು ಸರ್ಕಾರವಾಗಿದೆ. ಅಲ್ಪಸಂಖ್ಯಾತರ ಮತಗಳು ಇಲ್ಲದೆ ಕಾಂಗ್ರೆಸ್ ಬದುಕಲು ಸಾಧ್ಯವಿಲ್ಲ. ಅವರು ಎಂದಿಗೂ ಬಹುಸಂಖ್ಯಾತರ ರಾಜಕಾರಣ ಮಾಡಿಲ್ಲ. ಮನಸ್ಸಿಗೆ ಬಂದಂತೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಹಿಜಬ್ ವಿಷಯದಲ್ಲಿ ಸಿದ್ದರಾಮಯ್ಯ ಅವರ, ಯಾರು ಬೇಕಾದ್ರು ಏನು ಬೇಕಾದ್ರು ಡ್ರೆಸ್ ಹಾಕಿಕೊಂಡು ಹೋಗಬಹುದು ಎಂಬ ಹೇಳಿಕೆ ಮುಂದಿನ ದಿನ ಆತಂಕಕಾರಿ ಬೆಳವಣಿಗೆಗೆ ಕಾರಣ ಆಗುತ್ತೆ. ನಮ್ಮವರು ಕೇಸರಿ ಶಾಲು ಹಾಕಿಕೊಂಡು ಹೋಗ್ತಾರೆ. ಅವರು ಹಿಜಬ್ ಹಾಕಿಕೊಂಡು ಹೋಗ್ತಾರೆ. ಒಂದು ಚೌಕಟ್ಟಿನ ಕಲ್ಪನೆ ಸರ್ಕಾರಕ್ಕೆ ಇಲ್ಲಾ ಎಂದಾದರೇ ಸರ್ಕಾರ ಇದೆ ಎಂದು ಅನಿಸುವುದಿಲ್ಲ. ಸಿದ್ದರಾಮಯ್ಯನವರಿಗೆ ಧಮ್‌ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ ಎಂದು ಸವಾಲು ಹಾಕಿದ್ದಾರೆ.

ಸಿದ್ದರಾಮಯ್ಯನ ದುರಂಹಕಾರಿ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಕರ್ನಾಟಕದಲ್ಲಿ ಹಿಂದೂ ವಿರೋಧಿ ಸರ್ಕಾರ ಇರಲು ಸಾಧ್ಯವೇ ಇಲ್ಲ. ಕಾಂಗ್ರೆಸ್‌ನವರು ಬದುಕಬೇಕು ಎಂದರೆ ಮುಸ್ಲಿಮರ ಹಿಜಬ್‌ನ್ನು ಹಿಡಿದುಕೊಂಡೇ ವೋಟು ತಗೋಬೇಕು. ಹಿಜಬ್‌ನ ಹಿಂದೆ ತಿರುಗುವ ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ. ಕರ್ನಾಟಕದಲ್ಲಿ ಮುಂದಿನ ದಿನದಲ್ಲಿ ಬಿಜೆಪಿ ಬರುತ್ತದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!