ಸಿದ್ದರಾಮಯ್ಯ ಬೆಂಕಿ ಇದ್ದಂಗೆ, ಮುಟ್ಟೋಕೆ ಹೋದ್ರೆ ಸುಟ್‌ ಹೋಗ್ತಾರೆ: ಸಚಿವ ಜಮೀರ್‌ ಅಹಮದ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಅಂತ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮುಖ್ಯಮಂತ್ರಿಗಳ ಪರ ಬ್ಯಾಟಿಂಗ್‌ ಮಾಡಿದ್ದಾರೆ.

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ. ಸಿಎಂ, ಕೆಪಿಸಿಸಿ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಇದ್ದಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ಖಾಲಿ ಇದ್ರೆ ತಾನೇ ಚರ್ಚೆ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಖುರ್ಚಿ ಮುಟ್ಟೋಕೆ ಸಾಧ್ಯ ಏನ್ರಿ? ಅದೊಂಥರ ಬೆಂಕಿ ಅದು, ಬೆಂಕಿ ಮುಟ್ಟಿದ್ರೆ ಸುಟ್ಟೋಗ್ತಾರೆ. ಸಿದ್ದರಾಮಯ್ಯ ಬೆಂಕಿ ಇದ್ದಂತೆ, ನಾವು ಟಗರು ಅಂತೀವಿ. ಆ ಬೆಂಕಿ ಮುಟ್ಟೋಕೆ ಸಾಧ್ಯವಿಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಎದುರಾಳಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!