Monday, August 15, 2022

Latest Posts

“ರೈತರ ಪ್ರತಿಭಟನೆ ಬೆಂಬಲಿಸುವುದು ದೇಶದ್ರೋಹವಾದರೆ, ನಾನು ಜೈಲಿನಲ್ಲಿರುವುದೇ ಉತ್ತಮ”

ಹೊಸ ದಿಗಂತ ಆನ್ ಲೈನ್ ಡೆಸ್ಕ್:

“ಕೇಂದ್ರ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸುವುದು ದೇಶದ್ರೋಹವಾಗಿದ್ದರೆ, ನಾನು ಜೈಲಿನಲ್ಲಿರುವುದೇ ಉತ್ತಮ” ಎಂದು ಟೂಲ್ ಕಿಟ್ ಪ್ರಕರಣದಲ್ಲಿ ಜೈಲು ಸೇರಿಸುವ ದಿಶಾ ರವಿ ಹೇಳಿದ್ದಾರೆ.

ದಿಶಾ ಅವರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ವೇಳೆ ದಿಶಾ ಪರ ವಾದ ಮಂಡಿಸಿರುವ  ವಕೀಲರು, ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಟೋಲ್ ಕಿಟ್ ಕಾರಣ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ದೆಹಲಿ ಕೋರ್ಟ್’ಗೆ ತಿಳಿಸಿದ್ದಾರೆ.

“ರೈತರು ಕೇಂದ್ರ ಕೃಷಿ ಕಾಯ್ದೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಜಾಗತಿಕವಾಗಿ ಎತ್ತಿ ತೋರಿಸುವುದು ದೇಶದ್ರೋಹವಾದರೆ, ನಾನು ಜೈಲಿನಲ್ಲಿರುವುದೇ ಉತ್ತಮ” ಎಂದು  ದಿಶಾ ರವಿ ತಮ್ಮ ವಕೀಲರ ಮೂಲಕ ದೆಹಲಿ ಕೋರ್ಟ್ ಗೆ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss