ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಪಡೆಯದಿದ್ದರೆ ರಾಜಕೀಯ ನಿವೃತ್ತಿ: ಹೆಚ್.ಡಿ.ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಈ ಮೈತ್ರಿ ಪರಿಹಾರ ನೀಡಲಿದೆ. ಮುಂದಿನ ಐದು ವರ್ಷಗಳಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ಪಡೆಯದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಬಿಡದಿಯ ಕೇತಿಗಾನಹಳ್ಳಿಯ ತೋಟದಲ್ಲಿ ಜೆಡಿಎಸ್ ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾಧ್ಯಕ್ಷರು ಹಾಗೂ ಹಿರಿಯ ಮುಖಂಡರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ಜತೆಗಿನ ಮೈತ್ರಿ ನನ್ನ ಸ್ವಾರ್ಥಕ್ಕೆ ಅಲ್ಲ. ನಾಡಿನ ಹಿತಕ್ಕಾಗಿ. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಆಗದಂತೆ ಕಾನೂನಿನ ವ್ಯಾಪ್ತಿಯೊಳಗೆ ಈ ಸಮಸ್ಯೆ ಪರಿಹಾರ ಪಡೆಯುವ ಕೆಲಸ ಮಾಡುತ್ತೇನೆ’ ಎಂದು ಅವರು ಒತ್ತಿ ಹೇಳಿದರು.

ಹಿಂದೆ ನಾನು ರೂಪಿಸಿದ್ದ ಜಲಧಾರೆಯಲ್ಲೂ ಅತ್ಯುತ್ತಮ ಪರಿಹಾರ ಇತ್ತು. ಜನರು ಅವಕಾಶ ಕೊಡಲಿಲ್ಲ. ಕಾಂಗ್ರೆಸ್ ಪಕ್ಷವನ್ನು ನಂಬಿ ಮತ ಹಾಕಿದರು. ಆದರೆ ರಾಜ್ಯದ ಜನರ ಕಣ್ಣೀರು ಹಾಕಿಸುತ್ತಿದ್ದಾರೆ. ಹೀಗಾಗಿ ನಾನು ಕೆಲವು ದೃಢ ನಿರ್ಧಾರಗಳನ್ನು ಕೈಗೊಳ್ಳಬೇಕಾಯಿತು. ಈ ಮೈತ್ರಿಯಿಂದ ಅಧಿಕಾರಕ್ಕೆ ಬರುವುದು ನನ್ನ ಉದ್ದೇಶ ಅಲ್ಲ. ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ನನ್ನ ಗುರಿ. ಕೇಂದ್ರ ಸರ್ಕಾರದ ನೆರವಿನಿಂದ ಎಲ್ಲ ಸಮಸ್ಯೆ, ಯೋಜನೆಗಳಿಗೆ ಪರಿಹಾರ ಮಾಡಿಸುತ್ತೇನೆ. ಒಂದು ವೇಳೆ ಮಾಡಿಸದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇನ್ನೈದು ವರ್ಷಗಳಲ್ಲಿ ಅದೆಲ್ಲ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ನುಡಿದರು.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!