ವೇಶ್ಯಾವಾಟಿಕೆ ಸ್ಥಳದಲ್ಲಿ ಗ್ರಾಹಕ ಸಿಕ್ಕಿಬಿದ್ದರೆ ಬಂಧಿಸುವಂತಿಲ್ಲ: ಹೈಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಓರ್ವ ವ್ಯಕ್ತಿ ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದರೆ ಆತನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಈ ಮೂಲಕ ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶಿಸಿದ್ದಾರೆ.
ಹೈಕೋರ್ಟ್​ಗೆ ಓರ್ವ ಅರ್ಜಿ ಸಲ್ಲಿಸಿದ್ದು, ಅದರಲ್ಲಿ ತಾನು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು. ಹೀಗಾಗಿ, ಆತನನ್ನು ಕೂಡ ಬಂಧಿಸಿ, ಆತನ ವಿರುದ್ದ ಸೆಕ್ಷನ್ 3 (ವೇಶ್ಯಾಗೃಹ ಇರಿಸುವ ಶಿಕ್ಷೆ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿ), ಐಪಿಸಿ ಸೆಕ್ಷನ್ 4 (ವೇಶ್ಯಾವಾಟಿಕೆಯ ಗಳಿಕೆಯ ಮೇಲೆ ಜೀವನ), ಸೆಕ್ಷನ್ 5 (ವೇಶ್ಯಾವಾಟಿಕೆಗಾಗಿ ವ್ಯಕ್ತಿಯನ್ನು ಪ್ರೇರೇಪಿಸುವುದು ಅಥವಾ ಕರೆದೊಯ್ಯುವುದು) ಮತ್ತು ಅನೈತಿಕ ಸಂಚಾರ ತಡೆ ಕಾಯ್ದೆ (ITPA) ಮತ್ತು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 370 (ವ್ಯಕ್ತಿಗಳ ಕಳ್ಳಸಾಗಣೆ) ಸೆಕ್ಷನ್ 6 (ವೇಶ್ಯಾವಾಟಿಕೆ ನಡೆಸುವ ಆವರಣದಲ್ಲಿ ವ್ಯಕ್ತಿಯನ್ನು ಬಂಧಿಸುವುದು) ಕೇಸ್ ದಾಖಲಿಸಲಾಗಿತ್ತು.
ಹೀಗಾಗಿ ತನ್ನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರ ಹೈಕೋರ್ಟ್​ ಮೊರೆ ಹೋಗಿದ್ದರು.
ಇದೀಗ ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿರುವ ಗ್ರಾಹಕರು ವೇಶ್ಯಾಗೃಹವನ್ನು ಇಟ್ಟುಕೊಳ್ಳುವುದಿಲ್ಲ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿಸುವುದಿಲ್ಲ, ವೇಶ್ಯಾವಾಟಿಕೆಗೆ ಪ್ರೇರೇಪಿಸುವುದೂ ಇಲ್ಲ ಎಂಬ ಅಂಶವನ್ನು ಗಮನಿಸಿದ ಹೈಕೋರ್ಟ್​ ಆ ಅರ್ಜಿದಾರನ ಅರ್ಜಿಯನ್ನು ಅಂಗೀಕರಿಸಿತು ಮತ್ತು ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!