ಕಾರ್ಮಿಕರ ಕುಟುಂಬದ ಆರೋಗ್ಯ ಚೆನ್ನಾಗಿದ್ದರೆ ದೇಶದ ಪ್ರಗತಿಗೆ ವೇಗ: ಸಚಿವ ಶಿವರಾಮ ಹೆಬ್ಬಾರ್

ಹೊಸದಿಗಂತ ವರದಿ, ಯಲ್ಲಾಪುರ:

ದೇಶದ ಆರ್ಥಿಕತೆಗೆ ಶಕ್ತಿ ತುಂಬಬಲ್ಲ ಕಾರ್ಮಿಕ ಈ ದೇಶದ ಆಸ್ತಿ ಆತನ ಮತ್ತು ಆತನ ಕುಟುಂಬದ ಆರೋಗ್ಯ ಚೆನ್ನಾಗಿದ್ದರೆ ದೇಶದ ಪ್ರಗತಿಗೆ ವೇಗ ದೊರೆಯಲಿದೆ ಎಂದುಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.
ಅವರು ಭಾನುವಾರ ಪಟ್ಟಣ ಎ.ಪಿ.ಎಮ್.ಸಿ ರೈತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕಾರ್ಮಿಕ ಇಲಾಖೆ ಉತ್ತರಕನ್ನಡ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಆಯೋಜಿಸಿದ್ದ ” ಉಚಿತ ಆರೋಗ್ಯ ತಪಾಸಣಾ ಶಿಬಿರ ಅವರು ಕಟ್ಟಡ ಕಾರ್ಮಿಕರಿಂದ ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ ಮಾತನಾಡಿದ ಸಚಿವರು ,ರಾಜ್ಯದ ಅಪೋಲೋದಂಥಹ ಹೈ ಟೆಕ್ ಆಸ್ಪತ್ರೆಯ ಮೂಲಕ ಇಂದಿನಿಂದ ರಾಜ್ಯಾದ್ಯಂತ 75ರಿಂದ 80 ಲಕ್ಷ ಕಾರ್ಮಿಕರ ಒಟ್ಟು 20 ರೀತಿಯ ಆರೋಗ್ಯ ತಪಾಸಣೆಯನ್ನು ನಡೆಸಲಾಗುತ್ತಿದೆ. ಕಾರ್ಮಿಕರ ಪ್ರತಿಭಾನ್ವಿತ ಮಕ್ಕಳ ಉನ್ನತ ವಿದ್ಯಾಭ್ಯಾಸ ದ ಖರ್ಚು ವೆಚ್ಚಗಳನ್ನು ಇಲಾಖೆಯೇ ನೋಡಿಕೊಳ್ಳುತ್ತಿದೆ. ಈ ಬಾರಿ 400 ಕೋ ರೂ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಕಳೆದ 2017 ರಿಂದ ಕೊವಿಡ್ ಸಂದರ್ಭದಲ್ಲಿ 3ಲಕ್ಷ 2ಸಾವಿರ ಕಾರ್ಮಿಕರಿಗೆ ಇಲಾಖೆಯ ವತಿಯಿಂದ ಹಲವು ಸೌಲಭ್ಯಗಳನ್ನೂ ಕಲ್ಪಿಸಿಕೊಡಲಾಗಿದೆ ಎಂದರಲ್ಲದೇ ದೇಶದಲ್ಲೇ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಕಾರ್ಮಿಕ ಇಲಾಖೆಯ ಮೂಲಕವಾಗಿ ಶ್ರಮಿಕರ ಹಾಗೂ ಅವರ ಅವಲಂಭಿತರಿಗೆ ನುರಿತ ವೈದ್ಯರಿಂದ ರಾಜ್ಯದಾದ್ಯಂತ ತಪಾಸಣೆ ನಡೆಸಲಾಗುತ್ತಿದೆ. ಎಂದರು.
ಈ ಸಂದರ್ಭದಲ್ಲಿ ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ,ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯ ನಿರ್ವಾಹಣಾಕಾರಿ ಗುರುಪ್ರಸಾದ ಎಮ್.ಪಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಮುಲ್ಲಾ, ಅಪೋಲೋ ಆಸ್ಪತ್ರೆ ಯ ವ್ಯವಸ್ಥಾಪಕ ನಿರ್ದೇಶಕ ಚಂದನ ಕಾಮತ್,ಪ.ಪಂ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಆದಿತ್ಯ ಗುಡಿಗಾರ, ಮಂಡಲಾಧ್ಯಕ್ಷ ಗೋಪಾಲ ಕೃಷ್ಣ ಗಾಂವಕರ್,ಮುಂತಾದವರು ಇದ್ದರು.
ಪತ್ರಕರ್ತ ಕೇಬಲ್ ನಾಗೇಶ್ ನಿರ್ವಹಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!