ಹೊಸದಿಗಂತ ಡಿಜಿಟಲ್ ಡೆಸ್ಕ್:
ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹಮಾಸ್ ಬಂಡುಕೋರರಿಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಒತ್ತೆಯಾಳುಗಳನ್ನು ಜನವರಿ 20, 2025 ರೊಳಗೆ ಬಿಡುಗಡೆ ಮಾಡಬೇಕು. ಬಿಡುಗಡೆ ಮಾಡದಿದ್ದರೆ ಮುಂದಿನ ಪರಿಣಾಮಗಳು ಎದುರಿಸಬೇಕಾಗುತ್ತೆ. ಮಧ್ಯಪ್ರಾಚ್ಯಕ್ಕೆ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇಸ್ರೇಲ್ ಪರ ನಿಲ್ಲುವುದಾಗಿ ಟ್ರಂಪ್ ಹೇಳಿದ್ದಾರೆ. ಬೈಡೆನ್ ಅವರ ಸಾಂದರ್ಭಿಕ ಟೀಕೆಗಳನ್ನು ತ್ಯಜಿಸಲು ಪ್ರತಿಜ್ಞೆ ಮಾಡಿದ್ದಾರೆ.