ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಪಿಎಲ್ ಕಾರ್ಡ್ ನಲ್ಲಿ ಅರ್ಹರ ಹೆಸರು ಬಿಟ್ಟು ಹೋಗಿದ್ರೆ ಅಂತಹವರನ್ನು ಹೊಸದಾಗಿ ಸೇರ್ಪಡೆ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನರ್ಹ ಯಾರೆಲ್ಲ ಇದ್ದಾರೆ ಅವರನ್ನು ಬಿಪಿಎಲ್ ಕಾರ್ಡ್ ನಿಂದ ತೆಗೆದು ಹಾಕುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಕುರುಬ ಸಮೂದಾಯ ಎಸ್ಟಿ ಸೇರ್ಪಡೆ ಪ್ರತಿಕ್ರಿಯೆ ನೀಡಿದ ಅವರು ಇದನ್ನ ಕಳೆದ ಸರ್ಕಾರದಲ್ಲೇ ಶಿಫಾರಸು ಮಾಡಲಾಗಿತ್ತು. ನಾವು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ. ಅದನ್ನು ಒಪ್ಪುವುದು, ಬಿಡುವುದು ಕೇಂದ್ರ ಸರ್ಕಾರದ ನಿರ್ಧಾರ ಎಂದು ಹೇಳಿದ್ದಾರೆ.