ಪಕ್ಷ ಟಿಕೆಟ್ ಕೊಟ್ಟಿಲ್ಲ ಅಂದ್ರೆ, ಅವರಿಗೆ ಬೇರೆಯ ಜವಾಬ್ದಾರಿ ನೀಡಲಿದೆ ಎಂದ ಅರ್ಥ: ಅಣ್ಣಾಮಲೈ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಶುರುವಾಗಿರುವ ಬಂಡಾಯ, ರಾಜೀನಾಮೆ ಕುರಿತು ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಮಾತನಾಡಿದ್ದು, ಒಬ್ಬರಿಗೆ ಮಾತ್ರ ಟಿಕೆಟ್ ಕೊಡಲು ಸಾಧ್ಯ. ಉಳಿದವರಿಗೆ ಪಕ್ಷ ಸ್ಥಾನಮಾನ ನೀಡಲಿದೆ. ಟಿಕೆಟ್ ಕೊಟ್ಟಿಲ್ಲ ಅಂದ್ರೆ, ಅವರಿಗೆ ಬೇರೆಯ ಜವಾಬ್ದಾರಿ ನೀಡಲಿದೆ ಅಂತ ಅರ್ಥ ಎಂದು ಹೇಳಿದ್ದಾರೆ.

ಬಿಜೆಪಿ ಕಚೇರಿ (BJP Office) ಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿಪ್ರಾಯ ಸಂಗ್ರಹಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಕೇಂದ್ರದಲ್ಲಿ ನಡ್ಡಾ (J.P Nadda), ಮೋದಿ (Narendra Modi), ಅಮಿತ್ ಶಾ (AmitShah) ಅವರ ನೇತೃತ್ವದಲ್ಲಿಸಭೆ ಮಾಡಿ ಟಿಕೆಟ್ ನೀಡಲಾಗಿದೆ. ಎಲ್ಲಾ ರೀತಿಯ ಅಭಿಪ್ರಾಯದ ಮೂಲಕವೇ ಟಿಕೆಟ್ ನೀಡಲಾಗಿದೆ ಎಂದರು.

ಜಗದೀಶ್ ಶೆಟ್ಟರ್ (Jagadeesh Shettar) ವಿಚಾರದ ಕುರಿತು ಮಾತನಾಡಿ, ಜಗದೀಶ್ ಶೆಟ್ಟರ್ ದೊಡ್ಡವರು. ಪಕ್ಷ ಸಂಘಟನೆ ಮಾಡಿದ್ದಾರೆ. ಅವರು ಹೈಕಮಾಂಡ್ ಬಳಿಯೂ ಚರ್ಚೆ ಮಾಡಿದ್ದಾರೆ. ಈಶ್ವರಪ್ಪ ಅವರು ಈಗಾಗಲೇ ರಾಜಕೀಯ ನಿವೃತ್ತಿ ಹೋಂದೋದಾಗಿ ಪತ್ರ ಬರೆದಿದ್ದಾರೆ. ಅವರು ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುವ ಕೆಲಸ ಮಾಡಿದ್ದಾರೆ. 35-40 ವರ್ಷಗಳ ಪಕ್ಷಕ್ಕೆ ದುಡಿದಿದ್ದಾರೆ. ಅವರೆಲ್ಲರ ಕೊಡುಗೆಯನ್ನ ಪಕ್ಷ ಎಂದಿಗೂ ಮರೆಯಲ್ಲ. ಅವರಿಗಾಗಿ ಪಕ್ಷ ಏನಾದ್ರೂ ಮಾಡಲಿದೆ. ಟಿಕೆಟ್ ಸಿಗದೆ ಬಂಡಾಯ ಆಗುವುದು ಸಹಜ. ಅವರನ್ನ ಹಿರಿಯರು ಮಾತನಾಡಿಸಿ ಸಮಾಧಾನಪಡಿಸಲಿದ್ದಾರೆ ಎಂದು ಅಣ್ಣಾಮಲೈ ಹೇಳಿದರು.

ಚಾಮರಾಜಪೇಟೆಯಲ್ಲಿ ಬಿಜೆಪಿ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್‌ಗೆ ಟಿಕೆಟ್ ನೀಡಿದೆ. ಇದು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸೈಲೆಂಟ್ ಸುನೀಲನ ಕೆರಳಿಸಿದೆ.ಈ ಕುರಿತು ಮಾತನಾಡಿದ ಅವರು, ಇಷ್ಟೇ ಅಲ್ಲ ಸೈಲೆಂಟ್ ಸುನೀಲನ ಬೆಂಬಲಿಗರು ಮಹತ್ವದ ಸಲಹೆ ನೀಡಿದ್ದಾರೆ.

ಚಾಮರಾಜಪೇಟೆಯಲ್ಲಿ ಅಳೆದು ತೂಗಿ ಬಿಜೆಪಿ ಭಾಸ್ಕರ್ ರಾವ್‌ಗೆ ಟಿಕೆಟ್ ನೀಡಿದೆ. ಭಾಸ್ಕರ್ ರಾವ್ ಹಿಂದೆ ಬೆಂಗಳೂರು ಕಮಿಷನರ್ ಆಗಿ ಕೆಲಸ ಮಾಡಿದ್ದಾರೆ. ಜನರ ಸೇವೆ ಮಾಡಲು ಬಂದವರನ್ನು ಎಲ್ಲರು ಒಪ್ಪಿಕೊಳ್ಳಬೇಕು. ವ್ಯಕ್ತಿಯ ಬಗ್ಗೆ ನಾನು ಕಮೆಂಟ್ ಮಾಡುವುದಿಲ್ಲ. ಅಭ್ಯರ್ಥಿ ಬದಲಾವಣೆಗಾಗಿ ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶವಿದೆ. ಆದರೆ ಈ ಪ್ರತಿಭಟನೆ ಗೌರವಯುತವಾಗಿರುಬೇಕು. ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದು ತಪ್ಪು ಎಂದರ್ಥವಲ್ಲ. ಒಬ್ಬರಿಗೆ ಟಿಕೆಟ್ ಕೊಟ್ಟಾಗ ಎಲ್ಲರೂ ಒಪ್ಪಿಕೊಂಡು ಅವರ ಪರ ಕೆಲಸ ಮಾಡಬೇಕು ಎಂದು ಅಣ್ಣಾಮಲೈ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!