ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಭಾಷಣ ತಾರಕಕ್ಕೇರಿದೆ. ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಆರ್. ಅಶೋಕ್ ಅವರು ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ್ದಾರೆ, ಭಾರತದ ನಿಜವಾದ ಹಿಟ್ಲರ್ ಕಾಂಗ್ರೆಸ್ ಪಕ್ಷ, ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ ಯಾವ ಕಾರಣಕ್ಕೆ ತುರ್ತು ಪರಿಸ್ಥಿತಿ ಹೇರಿದ್ರು? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪ್ರಧಾನಿ ಮೋದಿಯವರನ್ನು ಹಿಟ್ಲರ್, ಮುಸಲೋನಿ ಎಂದು ಕರೆಯುತ್ತಾರೆ. ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಈ ಕುರಿತು ದೂರು ನೀಡುತ್ತೇವೆ. ಮೋದಿ ಈ ದೇಶದ ನಿಜವಾದ ಹೀರೋ. ಮೋದಿಯನ್ನು ಸರ್ವಾಧಿಕಾರಿ ಎಂದು ಕರೆದ ಕಾಂಗ್ರೆಸ್ ಹೇಳಿಕೆಯನ್ನು ನಾವು ಖಂಡಿಸುತೇವೆ ಎಂದು ಕಿಡಿಕಾರಿದ್ದಾರೆ.