ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುತ್ತಿಗೆದಾರನಿಗೆ ಬೆದರಿಕೆ ಮತ್ತು ಜಾತಿ ನಿಂದನೆ ಆರೋಪದ ಮೇಲೆ ಜಾಮೀನಿನ ಮೇಲೆ ಹೊರಬಂದಿರುವ ಶಾಸಕ ಮುನಿರತ್ನ ಅವರನ್ನು ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿದ್ದಾರೆ.
2020 ರಿಂದ 2022 ರ ನಡುವೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರನ್ನು ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.