ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ಮೇಲೆ ನಿರಂತರ ದಾಳಿ ನಡೆಸುತ್ತಿರುವ ರಷ್ಯಾಕ್ಕೆ ಯುದ್ಧದಿಂದ ಹಿಂದೆ ಸರಿಯಬಾರದು ಎಂದು ಒತ್ತಡವಿದೆ. ಹೀಗಾಗಿ ಸಂಘರ್ಷ ಕೊನೆಗಾಣಿಸಲು ರಷ್ಯಾಕ್ಕೆ ಯಾವುದೇ ಮಾರ್ಗವಿಲ್ಲ ಎಂದು ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಮುಖ್ಯಸ್ಥ ಎಲೋನ್ ಮಸ್ಕ್ ಹೇಳಿದ್ದಾರೆ.
ಪುಟಿನ್ ಯುದ್ಧದಿಂದ ಹಿಂದೆ ಸರಿದರೆ ಅವರನ್ನು ಕೊಲ್ಲುವ ಸಾಧ್ಯತೆಯಿದೆ. ಈ ಕಾರಣದಿಂದಲೇ ಪುತಿನ್ ಯುದ್ಧ ಮುಂದುವರಿಸಿದ್ದಾರೆ. ಅವರ ಮೇಲೆ ಹೆಚ್ಚಿನ ಒತ್ತಡವಿದೆ ಎಂದರು.
ರಿಪಬ್ಲಿಕನ್ ಪಕ್ಷದ ಪ್ರತಿನಿಧಿಗಳೊಂದಿಗೆ ಚರ್ಚೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿಡಿದ್ದಾರೆ.
ಉಕ್ರೇನ್‌ನಲ್ಲಿ ರಷ್ಯಾ ಸೋಲುವ ಸಾಧ್ಯತೆ ಇಲ್ಲ. ಉಕ್ರೇನ್ ಗೆಲ್ಲುತ್ತದೆ ಎಂದು ಭಾವಿಸುವುದು ದೇಶಕ್ಕೆ ಒಳ್ಳೆಯದಲ್ಲ ಎಂದರು. ಯುದ್ಧವು ದೀರ್ಘಕಾಲದವರೆಗೆ ಮುಂದುವರಿದರೆ ಅದು ಅವರ ನಷ್ಟವಾಗಿದೆ. ಇತ್ತೀಚೆಗಷ್ಟೇ ಅಮೆರಿಕಾ ಘೋಷಿಸಿರುವ ಆರ್ಥಿಕ ನೆರವಿನಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದರು.