ನಾವೇನಾದ್ರು ಅಧಿಕಾರಕ್ಕೆ ಬಂದ್ರೆ ರಾಮನಗರ-ಚನ್ನಪಟ್ಟಣ ಅವಳಿ ನಗರ ಮಾಡ್ತೀವಿ: HDK

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೆಡಿಎಸ್ ಯಾವತ್ತೂ ಸ್ವಂತ ಸರ್ಕಾರ ರಚಿಸಲಿಲ್ಲ. ನನ್ನ ಪಕ್ಷವು ಐದು ವರ್ಷಗಳ ಕಾಲ ಸರ್ಕಾರ ರಚಿಸುವ ಭರವಸೆ ಹೊಂದಿದೆ. ನಮ್ಮ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಹುಬ್ಬಳ್ಳಿ-ಧಾರವಾಡ ರೀತಿ ಚನ್ನಪಟ್ಟಣ ಮತ್ತು ರಾಮನಗರ ಅವಳಿ ನಗರಗಳನ್ನು ರಚಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಚನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು 14 ತಿಂಗಳ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೀರಾವರಿ ಯೋಜನೆ ಜಾರಿಗೊಳಿಸಿದ್ದೇನೆ. ನಂತರ ನನ್ನನ್ನು ಕೆಳಗಿಳಿಸಲಾಯಿತು. ಆದರೆ ಈಗ ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವನಾಗಿದ್ದೇನೆ. ಆರೋಗ್ಯವನ್ನು ಲೆಕ್ಕಿಸದೆ ಕೆಲಸ ಮಾಡಿ. ವಿಶಾಖಪಟ್ಟಣಂನಲ್ಲಿ ಮುಚ್ಚಿದ ಕಾರ್ಖಾನೆಯನ್ನು ಮತ್ತೆ ತೆರೆಯಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್​​ನವರನ್ನು ನಂಬಬೇಡಿ ಕೈಜೋಡಿಸಿ ಮನವಿ ಮಾಡುತ್ತೇನೆ. ಜನರನ್ನು ಆರ್ಥಿಕವಾಗಿ ಬೆಳೆಸುವ ಬದ್ಧತೆ ಕಾಂಗ್ರೆಸ್​ಗೆ ಇಲ್ಲ ಎಂದು ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!