ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ಸಂವಿಧಾನದ ಬಗ್ಗೆ ಹೆಚ್ಚು ಅರಿತಾಗ ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಹೇಳುತ್ತಾ ಸಿಎಂ ಸಿದ್ದರಾಮಯ್ಯ ಗಣರಾಜ್ಯೋತ್ಸವದ ಶುಭಾಷಯಗಳನ್ನು ತಿಳಿಸಿದ್ದಾರೆ.
ಸಿಎಂ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿಯೂ ಜನತೆಗೆ ಶುಭಾಶಯ ಕೋರಿದ್ದಾರೆ.
ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2024ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿದೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ,… pic.twitter.com/K4ejtRCLXi
— Siddaramaiah (@siddaramaiah) January 26, 2024