ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡುವುದಿಲ್ಲ ಎಂದು ಗಟ್ಟಿಯಾಗಿ ನಿಂತರೆ ನಾವೂ ಸರ್ಕಾರದ ಜೊತೆಗೆ ನಿಲ್ಲುತ್ತೇವೆ: ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿಗೆ (Tamilnadu) ಯಾವುದೇ ಕಾರಣಕ್ಕೂ ಕಾವೇರಿ ನೀರು (Cauvery Water) ಬಿಡುವುದಿಲ್ಲ ಎಂದು ರಾಜ್ಯ ಸರ್ಕಾರ ಗಟ್ಟಿಯಾಗಿ ನಿಂತರೆ ನಾವೂ ಸರ್ಕಾರದ ಜೊತೆಗೆ ನಿಲ್ಲುತ್ತೇವೆ ಎಂದು ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಕಾವೇರಿ ನೀರು ನಿಯಂತ್ರಣಾ ಸಮಿತಿಯ (CWRC) ಪ್ರತಿ ದಿನ 5000 ಕ್ಯೂಸೆಕ್‌ನಂತೆ ತಮಿಳುನಾಡಿಗೆ ಮತ್ತೆ 15 ದಿನ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೊದಲಿನಿಂದಲೂ ಎಡವುತ್ತಿದೆ‌. ನಾಳೆ ಕಾವೇರಿ ನೀರು ನಿರ್ವಹಣಾ ನ್ಯಾಯಮಂಡಳಿ (CWMA) ಸಭೆ ಇದೆ. ಅಲ್ಲಿ ರಾಜ್ಯ ಸರ್ಕಾರ ವಾಸ್ತವ ಹೇಳಬೇಕು. ಸಭೆಯಿಂದ ಹೊರಬರುತ್ತಾರೋ ಏನು ಮಾಡುತ್ತಾರೋ ಅವರಿಗೆ ಬಿಟ್ಟಿದ್ದು. ಮುಂದಿನ ವಾರ ಸುಪ್ರೀಂಕೊರ್ಟ್ ನಲ್ಲಿ ವಿಚಾರಣೆ ಇದೆ. ಅಲ್ಲಿಯೂ ಸರ್ಕಾರ ಬಲವಾಗಿ ವಾದ ಮಾಡಲಿ. ನಮ್ಮ ಕಾವೇರಿ ಮಕ್ಕಳ ಹಿತ ಬಲಿ ಕೊಟ್ಟು ನೀರು ಬಿಡಬೇಡಿ. ಕಾನೂನು ತಂಡ ಮರು ಚಿಂತನೆ ಮಾಡಬೇಕು. ನಾವು ಇದರಲ್ಲಿ ರಾಜಕಾರಣ ಮಾಡುತ್ತಿಲ್ಲ. ಇವರು ಗಟ್ಟಿಯಾಗಿ ನಿಲ್ಲಬೇಕು. ಅಂದರೆ ನಾವು ಸರ್ಕಾರದ ಜೊತೆ ನಿಲ್ಲುತ್ತೇವೆ. ಇವರು ಕೇಂದ್ರಕ್ಕೆ ಪತ್ರ ಬರೆದಿರುವುದಾಗಿ ಹೇಳುತ್ತಾರೆ. ಅದನ್ನು ಬಿಟ್ಡು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಮನವೊಲಿಕೆ ಮಾಡಬೇಕು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!