ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲೆ ಕೇಸ್‌ನಲ್ಲಿ ಸೆರೆಯಾಗಿರುವ ನಟ ದರ್ಶನ್ ಪ್ರಕರಣದ ಸುದ್ದಿ ನಾಗರೀಕ ಸಮಾಜ ತಲೆ ತಗ್ಗಿಸುವಂತದ್ದು. ಅಷ್ಟು ಕ್ರೂರ ಮನಸ್ಥಿತಿ ಇರುತ್ತೆ ಎಂದು ಯಾರೂ ಭಾವಿಸಿರಲಿಲ್ಲ ಎಂದು ಬಿಜಿಪಿ ನಾಯಕ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.
ಸಿನಿಮಾದಲ್ಲಿ ಹೀರೋ ಆದವರೆಲ್ಲ ನಿಜ ಜೀವನದಲ್ಲಿ ಹೀರೋಗಳಾಗಿರಲ್ಲ. ದರ್ಶನ ಪ್ರಕರಣ ನೋಡಿದಾಗ ಅವರು ಸಿನಿಮಾದಲ್ಲಿ ಮಾತ್ರ ಹೀರೋ ಆಗಿದ್ದರು ಅನ್ನಿಸುತ್ತದೆ ಎಂದರು.
ನಮ್ಮ ಪಕ್ಷದವರು ರೇಣುಕಾಸ್ವಾಮಿ ಕುಟುಂಬದ ಜತೆ ಇದೆ, ಅವರಿಗೆ ನ್ಯಾಯ ಸಿಗಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ. ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಹೆಚ್ಚು ಬದ್ಧತೆ ಇರಬೇಕು. ರಾಜಕಾರಣಿಗಳ ಮೇಲಿನ ಟೀಕೆಗೆಲ್ಲ ಆ ರೀತಿಯೇ ಮಾಡುವುದಾದರೆ ಗಂಟೆಗೊಂದು ಹೆಣ ಬೀಳುತ್ತಿತ್ತು. ಆ ಕ್ರೌರ್ಯವನ್ನು ಯಾರೂ ಒಪ್ಪಲು ಸಾಧ್ಯವಿಲ್ಲ ಎಂದರು.
ನಟ ದರ್ಶನ್‌ಗೆ ರಾಜಮರ್ಯಾದೆ, ವಿಶೇಷ ಸವಲತ್ತು ಕೊಡುತ್ತಿದ್ದಾರೆ ಎನ್ನುವ ಸಂದೇಶವೇ ಒಳ್ಳೆದಲ್ಲ. ಆ ರೀತಿ ಇದ್ದರೆ ಬಲ ಇದ್ದವನಿಗೆ, ಬಡವನಿಗೊಂದು ರೀತಿ ಎಂಬ ಸಂದೇಶ ಹೋಗುತ್ತದೆ ಎಂದು ಸಿ.ಟಿ.ರವಿ ಹೇಳಿದರು.
ಯಡಿಯೂರಪ್ಪ ಅವರ ವಿರುದ್ಧದ ಕೇಸ್ ಬಗ್ಗೆಯೂ ನಿಮ್ಮ ಅಭಿಪ್ರಾಯ ಇದೇ ಏನು ರವಿ ಮಾಮಾ