April 8, 2026
Wednesday, April 8, 2026
spot_img

ಬಾಲಿವುಡ್ ನಟನಾದರೆ ಮಧ್ಯಾಹ್ನವೇ ವಿಚಾರಣೆ ನಡೆಸಬೇಕೇ? ರಣವೀರ್ ಸಿಂಗ್ ಗೆ ಹೈಕೋರ್ಟ್ ಚಾಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಕಾಂತಾರಾ ಚಾಪ್ಟರ್-1’ ಸಿನಿಮಾದ ಪಾತ್ರದ ಕುರಿತು ಅವಹೇಳನಕಾರಿಯಾಗಿ ವರ್ತನೆ ತೋರಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಹೈಕೋರ್ಟ್ ಗರಂ ಆಗಿದೆ.

ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ರಣವೀರ್ ಸಿಂಗ್ ಪರ ವಕೀಲರು ಮನವಿ ಮಾಡಿದರು.

ಈ ವೇಳೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಬಾಲಿವುಡ್ ನಟನಾದರೆ ಮಧ್ಯಾಹ್ನವೇ ವಿಚಾರಣೆ ನಡೆಸಬೇಕೇ? ಒಂದು ವೇಳೆ ಹಾಲಿವುಡ್ ನಟನಾದರೆ ಈಗಲೇ ವಿಚಾರಣೆ ನಡೆಸಬೇಕೆ?” ಎಂದು ಪ್ರಶ್ನಿಸಿದರು. ಅಂತಿಮವಾಗಿ ವಿಚಾರಣೆಯನ್ನು ನಾಳೆಗೆ (ಫೆಬ್ರವರಿ 24) ನಿಗದಿಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !