Friday, December 26, 2025

ಅಹಿಂದ ಹೆಣ್ಣು ಮಕ್ಕಳ ಮೇಲೆ ಕಾಳಜಿ ಇದ್ದರೆ ‘ಸರ್ಕಾರಿ ಹಾಸ್ಟೆಲ್ ಟೂರ್’ ಮಾಡಿ: ಬಿಜೆಪಿ ಒತ್ತಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ವಿವಿಧೆಡೆ ಸರ್ಕಾರಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಒಬಿಸಿ ಹಾಸ್ಟೆಲ್ ಗಳಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರು ಗರ್ಭಿಣಿ ಆಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಈ ಕುರಿತ ವರದಿಯೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಪ್ರತಿಪಕ್ಷ ನಾಯಕ ಆರ್, ಅಶೋಕ, ಸಿಎಂ ಸಿದ್ದರಾಮಯ್ಯರೇ, ಅಹಿಂದ ಹೆಣ್ಣು ಮಕ್ಕಳ ಮೇಲೆ ಕಾಳಜಿ ಇದ್ದರೆ ‘ಸರ್ಕಾರಿ ಹಾಸ್ಟೆಲ್ ಟೂರ್’ ಮಾಡಿ ಎಂದು ಒತ್ತಾಯಿಸಿದ್ದಾರೆ.

ಬಡ ಕುಟುಂಬದ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಆಸರೆಯಾಗಿರುವ ಸರ್ಕಾರಿ ಎಸ್ಸಿ-ಎಸ್ಟಿ, ಒಬಿಸಿ ಹಾಸ್ಟೆಲ್ ಗಳಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರು ಗರ್ಭಿಣಿ ಆಗುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದು ಅತ್ಯಂತ ಅಂತಕಕಾರಿ ಬೆಳವಣಿಗೆಯಾಗಿದ್ದು, ಇದನ್ನ ರಾಜ್ಯ ಸರ್ಕಾರ ಗಂಬೀರವಾಗಿ ಪರಿಗಣಿಸಿ ಈ ಪಿಡುಗನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

error: Content is protected !!