ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಜ್ಯ ಸರ್ಕಾರ ಲಾಕ್ಡೌನ್ ಮುಂದುವರಿಸುವುದೇ ಆದರೆ ಅದು ಜನಹಿತದ ಲಾಕ್ಡೌನ್ ಆಗಿರಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಕೊರೋನಾ ಕಡಿಮೆಯಾಗದ ಹಿನ್ನೆಲೆ ಲಾಕ್ಡೌನ್ ವಿಸ್ತರಣೆ ಆಗುತ್ತದೆ ಎನ್ನುವ ಸುದ್ದಿ ಹರಿದಾಡುತ್ತಿದೆ ಇದು ನಿಜವೇ ಆದರೆ ಜನಹಿತದ ಲಾಕ್ಡೌನ್ ಮಾಡಿ. ಆರ್ಥಿಕ, ಆಹಾರಪ್ಯಾಕೇಜ್ ಬಗ್ಗೆ ಗಮನ ಇರಲಿ ಎಂದು ಹೇಳಿದ್ದಾರೆ.