ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ, ನಿರ್ದೇಶಕ ಉಪೇಂದ್ರ ಅಭಿನಯದ ಯುಐ ಸಿನಿಮಾಗೆ ಸಿಕ್ಕಾಪಟ್ಟೆ ಹೈಪ್ ಸಿಕ್ತಿದೆ. ಮುಂಜಾನೆಯೇ ಅನೇಕ ಶೋಗಳು ಹೌಸ್ಫುಲ್ ಆಗಿವೆ. ಆ ಮೂಲಕ ‘ಯುಐ’ ಸಿನಿಮಾಗೆ ಒಳ್ಳೆಯ ಓಪನಿಂಗ್ ಸಿಕ್ಕಿದೆ. ಎಂದಿನಂತೆ ತಮ್ಮ ಬುದ್ಧಿವಂತಿಕೆ ಮೂಲಕ ಉಪೇಂದ್ರ ಅವರು ಪ್ರೇಕ್ಷಕರ ಮೆದುಳಿಗೆ ಕೈ ಹಾಕಿದ್ದಾರೆ. ಸಿನಿಮಾ ನೋಡಿ ಚಿತ್ರಮಂದಿರದಿಂದ ಹೊರಗೆ ಬಂದಿರುವ ಪ್ರೇಕ್ಷಕರು ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ. ಕೆಲವರಿಗೆ ಸಿನಿಮಾ ಇಷ್ಟ ಆಗಿದೆ. ಇನ್ನೂ ಕೆಲವರಿಗೆ ಪೂರ್ತಿಯಾಗಿ ಅರ್ಥ ಆಗಿಲ್ಲ. ಇನ್ನೊಮ್ಮೆ ನೋಡಬೇಕು ಎನ್ನುವ ಪ್ರೇಕ್ಷಕರು ಕೂಡ ಇದ್ದಾರೆ.
ಆರಂಭದಲ್ಲೇ ಉಪೇಂದ್ರ ಶಾಕ್ ನೀಡಿದ್ದಾರೆ. ‘ನೀವು ಬುದ್ಧಿವಂತರಾಗಿದ್ರೆ ಈಗಲೇ ಚಿತ್ರಮಂದಿರದಿಂದ ಎದ್ದೋಗಿ’ ಎಂದು ಹೇಳುವ ಮೂಲಕ ಜನರನ್ನು ಕನ್ಫ್ಯೂಸ್ ಮಾಡಿಸುತ್ತಾರೆ. ಟಿಕೆಟ್ಗೆ ದುಡ್ಡು ಕೊಟ್ಟು ಬಂದ ಪ್ರೇಕ್ಷಕರನ್ನು ಎದ್ದು ಹೋಗಿ ಅಂತ ಹೇಳಿದ್ದಕ್ಕೆ ಪ್ರೇಕ್ಷಕರಿಗೆ ಶಾಕ್ ಆಗಿದೆ. ಈ ವಿಷಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.