ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಹನ ಸವಾರರಿಗೆ ಸಂಚಾರಿ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ಸಂದೇಶವೊಂದು ಬಂದಿದೆ. ಇನ್ಮುಂದೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ, ಕೇವಲ ದಂಡ ಮಾತ್ರ ಬೀಳುವುದಿಲ್ಲ. ದಂಡದ ಜೊತೆಗೆ ಕ್ರಿಮಿನಲ್ ಕೇಸ್ ಕೂಡ ದಾಖಲಾಗುತ್ತದೆ.
ಹೌದು, ಬೆಂಗಳೂರಿನಲ್ಲಿ ವಾಹನ ಚಾಲಕರು ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಇದರಿಂದ ಸಾಕಷ್ಟು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದು, ಸಂಚಾರಿ ನಿಯಮ ಉಲ್ಲಂಘಿಸಿದರೆ ದಂಡದ ಜೊತೆಗೆ ಸಂಚಾರಿ ಪೊಲೀಸರು ಕ್ರಿಮಿನಲ್ ಕೇಸ್ ದಾಖಲಿಸುತ್ತಿದ್ದಾರೆ. ಐಪಿಸಿ ಸೆಕ್ಷನ್ 283ರ ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗುತ್ತಿದೆ.
ಒಮ್ಮೆ ಎಫ್ಐಆರ್ ದಾಖಲಾದರೆ ನಿಮ್ಮ ವಾಹನವನ್ನು ಸೀಜ್ ಮಾಡಲಾಗುತ್ತದೆ. ಸೀಜ್ ಮಾಡಿದ ವಾಹನ ಬೇಕಾದರೆ, ನ್ಯಾಯಾಲಾಯದ ಅನುಮತಿಯನ್ನು ಪಡೆದೇ ಬಿಡಿಸಿಕೊಳ್ಳಬೇಕು. ಹೀಗಾಗಿ ಸಂಚಾರಿ ನಿಯಮಗಳ ಬಗ್ಗೆ ಎಚ್ಚರದಿಂದ ಇರುವಂತೆ ಟ್ರಾಫಿಕ್ ಪೊಲೀಸರು ಸಲಹೆ ನೀಡಿದ್ದಾರೆ.