ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಮನೆ ಕಟ್ಟಿದ್ದರೆ ಅದನ್ನು ತೋರಿಸಿ ನಾನು ಈ ಕ್ಷಣವೇ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡ್ತೀನಿ ಎಂದು ಸಚಿವ ಜಮೀರ್ ಅಹ್ಮದ್ ಸವಾಲ್ ಹಾಕಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ನವೀನ್, ವಸತಿ ಯೋಜನೆ ಬಗ್ಗೆ ಪ್ರಶ್ನೆ ಮಾಡಿದರು. ಕಾಂಗ್ರೆಸ್ ಸರ್ಕಾರ ವಸತಿ ಯೋಜನೆ ಅಡಿ ಮನೆ ಸರಿಯಾಗಿ ನಿರ್ಮಾಣ ಮಾಡುತ್ತಿಲ್ಲ ಎಂದು ಆರೋಪ ಮಾಡಿದರು.
ಇದರಲ್ಲಿ ರಾಜಕೀಯ ಮಾಡಬೇಡಿ. ಬಿಜೆಪಿ ಅವಧಿಯಲ್ಲಿ ಒಂದೇ ಒಂದು ಮನೆ ಕೊಟ್ಟಿಲ್ಲ. ಮನೆ ಕೊಟ್ಟಿರೋದು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಬಿಜೆಪಿ ಸದಸ್ಯರಿಗೆ ಎರಡು ಬಾರಿ ಸವಾಲ್ ಹಾಕಿದರು.