ದಲಿತರ ಬಗ್ಗೆ ಅಷ್ಟೊಂದು ಕಾಳಜಿ ಇದ್ರೆ SCSP/TSPI ಕಾಯ್ದೆ ಜಾರಿಗೆ ತನ್ನಿ: ಮೋದಿಗೆ ಸಿದ್ದು ಸವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ನಿಧಿ ಹಗರಣ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪ ಮಾಡುತ್ತಿದ್ದಾರೆ. ದಲಿತರ ಬಗ್ಗೆ ನಿಮಗೆ ಹೆಚ್ಚಿನ ಕಾಳಜಿ ಇದ್ದರೆ, ಪರಿಶಿಷ್ಟ ಜಾತಿ ಉಪ ಯೋಜನೆ ಕಾಯ್ದೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಎಸ್‌ಸಿಎಸ್‌ಪಿ/ಟಿಎಸ್‌ಪಿ) ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೊಳಿಸಿ, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ವಿತರಿಸಿ ಮತ್ತು ನಂತರ ನಮ್ಮ ದಲಿತ ಹೋರಾಟವನ್ನು ಪ್ರಶ್ನಿಸಿ ಎಂದು ಸಿಎಂ ಸಿದ್ದು ಸವಾಲ್ ಹಾಕಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರವನ್ನು ಒಂದು ದಶಕದಿಂದ ನಾವು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿಯವರು ಈಗ ಕಾಂಗ್ರೆಸ್ ಸರ್ಕಾರದ ದಲಿತರ ಮೇಲಿನ ಅನ್ಯಾಯದ ಬಗ್ಗೆ ಚುನಾವಣಾ ಸಭೆಗಳಲ್ಲಿ ಅಳಲು ತೋಡಿಕೊಳ್ಳುತ್ತಿರುವುದು ತಮಾಷೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!