March 23, 2026
Monday, March 23, 2026
spot_img

ನೀವು ಭಾರತಕ್ಕೆ ಬಂದರೆ ಅರ್ಜಿ ವಿಚಾರಣೆ: ವಿಜಯ್ ಮಲ್ಯಗೆ ಕೊನೆಯ ಎಚ್ಚರಿಕೆ ಕೊಟ್ಟ ಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಗುರುವಾರ ಛೀಮಾರಿ ಹಾಕಿದ್ದು, ಭಾರತಕ್ಕೆ ಮರಳಲು ಕೊನೆ ಅವಕಾಶ ನೀಡಿದೆ.

ಕೇಂದ್ರ ಸರ್ಕಾರದ ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ (FEOA) ಮತ್ತು ಅದರ ಅಡಿಯಲ್ಲಿ ತಮ್ಮನ್ನು ದೇಶಭ್ರಷ್ಟ ಎಂದು ಘೋಷಿಸಿರುವುದನ್ನು ಪ್ರಶ್ನಿಸಿ ವಿಜಯ್ ಮಲ್ಯ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಗೌತಮ್ ಅನ್ಬಾಡ್ ಅವರಿದ್ದ ಪೀಠವು ನಡೆಸುತ್ತಿದ್ದು, ಮಲ್ಯ ನ್ಯಾಯಾಲಯದ ವ್ಯಾಪ್ತಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ದಾಖಲೆಗಳು ತೋರಿಸುತ್ತಿವೆ. ಆದ್ದರಿಂದ ಅವರ ಅರ್ಜಿಯಲ್ಲಿ ಪರಿಹಾರವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಭಾರತಕ್ಕೆ ನೀವು ಕೂಡಲೇ ಮರಳಬೇಕು. ಇಲ್ಲದಿದ್ದರೆ ನಿಮ್ಮ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಉದ್ದೇಶಪೂರ್ವಕವಾಗಿ ನ್ಯಾಯಾಲಯದ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುತ್ತಿದ್ದೀರಿ. ಹೀಗಾಗಿ ನ್ಯಾಯಯುತ ಪರಿಹಾರವನ್ನು ಪಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಈ ವೇಳೆ ಭಾರತಕ್ಕೆ ಮರಳಲು ಕೊನೆಯ ಅವಕಾಶ ನೀಡುತ್ತಿರುವುದಾಗಿ ಹೇಳಿದ ನ್ಯಾಯಾಲಯ ಮುಂದಿನ ವಾರಕ್ಕೆ ಪ್ರಕರಣವನ್ನು ಮುಂದೂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !