ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರಂತೆಯೇ ಕೊಲ್ಲಲಾಗುವುದು ಎಂದು ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶವೊಂದು ಬಂದಿದೆ.
ಮುಂಬೈ ಪೊಲೀಸ್ ಸಂಚಾರ ನಿಯಂತ್ರಣ ಕೊಠಡಿಗೆ ಶನಿವಾರ ಸಂಜೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದೆ. ಬೆದರಿಕೆ ಸಂದೇಶಗಳನ್ನು ಯಾರು ಕಳುಹಿಸಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂದೇಶಕ್ಕೆ ಪ್ರತಿಕ್ರಿಯೆಯಾಗಿ ಮುಖ್ಯಮಂತ್ರಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ.