ದಂಡಗಿಂಡ ಅಲ್ಲ ಇಲ್ಲಿ ಕುಡಿದು ವಾಹನ ಚಲಾಯಿಸಿದ್ರೆ ಸೀದಾ ಆಸ್ಪತ್ರೆಗೆ ಮಾಡ್ತಾರೆ ಅಡ್ಮಿಟ್ !

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಂಜಾಬ್ ಸರ್ಕಾರ ಸಂಚಾರ ನಿಯಮಗಳಿಗೆ ಸಂಬಂಧಿಸಿದಂತೆ ಹೊಸ ರೂಲ್ಸ್ ಜಾರಿಗೊಳಿಸಿದೆ. ಇದರ ಅನ್ವಯನಿಯಮ ಉಲ್ಲಂಘಿಸಿದರೆ ದಂಡವನ್ನು ಪಾವತಿಸುವುದಲ್ಲದೆ, ತಪ್ಪನ್ನು ಪುನರಾವರ್ತಿಸಿದರೆ ದಂಡವನ್ನು ದ್ವಿಗುಣಗೊಳಿಸಲಾಗುವುದು ಎಂದು ಹೇಳಿದೆ.

ಇನ್ನು ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಮೂರು ತಿಂಗಳ ಕಾಲ ಚಾಲನಾ ಪರವಾನಗಿ ಅಮಾನತುಗೊಳಿಸಲಾಗುವುದು. ಇದರೊಂದಿಗೆ ಹತ್ತಿರದ ಆಸ್ಪತ್ರೆಯಲ್ಲಿ ಸಮುದಾಯ ಸೇವೆಯನ್ನು ಮಾಡಬೇಕು ಅಥವಾ ಒಂದು ಯೂನಿಟ್ ರಕ್ತವನ್ನು ನೀಡಬೇಕಾಗುತ್ತದೆ.

ಇದೀಗ ಈ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಶಿಕ್ಷೆ ವಿಧಿಸಿದ ರೀತಿಚರ್ಚೆಗೆ ಗ್ರಾಸವಾಗಿದ್ದು, ಯಾರಾದರೂ ಸಂಚಾರ ನಿಯಮ ಉಲ್ಲಂಘಿಸಿದರೆ ರಿಫ್ರೆಶ್ ಕೋರ್ಸ್‌ಗೆ ಒಳಗಾಗಬೇಕಾಗುತ್ತದೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಇದರ ನಂತರ, ಸಾರಿಗೆ ಪ್ರಾಧಿಕಾರದಿಂದ ಪ್ರಮಾಣಪತ್ರವನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಅಷ್ಟೇ ಅಲ್ಲ, ಕನಿಷ್ಠ 20 ಶಾಲಾ ವಿದ್ಯಾರ್ಥಿಗಳಿಗೆ ಎರಡು ಗಂಟೆಗಳ ಕಾಲ ಸಂಚಾರ ನಿಯಮಗಳನ್ನು ಕಲಿಸಬೇಕಾಗುತ್ತದೆ ಎನ್ನಲಾಗಿದೆ.

ಇನ್ನು ಸಂಚಾರ ನಿಯಮ ಉಲ್ಲಂಘಿಸುವವರಿಗೆ ಸಾಮಾನ್ಯ ಶಿಕ್ಷೆಯಾಗಿ ಮೂರು ತಿಂಗಳ ಕಾಲ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲಾಗುವುದು . ಇವುಗಳಲ್ಲಿ ಅತಿವೇಗ, ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವುದು, ಕುಡಿದು ವಾಹನ ಚಲಾಯಿಸುವುದು, ಟ್ರಿಪಲ್ ರೈಡಿಂಗ್ ಮತ್ತು ರೆಡ್ ಲೈಟ್ ಜಂಪ್ ಮಾಡುವುದು ಸೇರಿವೆ.

ಅತಿವೇಗಕ್ಕೆ 1,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಯಾರಾದರೂ ಈ ನಿಯಮವನ್ನು ಪದೇ ಪದೇ ಉಲ್ಲಂಘಿಸುವುದು ಕಂಡುಬಂದರೆ, ದಂಡವನ್ನು ದ್ವಿಗುಣಗೊಳಿಸಲಾಗುತ್ತದೆ. ಅದೇ ಸಮಯದಲ್ಲಿ, ಮದ್ಯಪಾನ ಮಾಡಿ ವಾಹನ ಚಲಾಯಿಸುವುದು, ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದರೆ 5,000 ರೂ. ಈ ನಿಯಮವನ್ನು ಎರಡನೇ ಬಾರಿ ಉಲ್ಲಂಘಿಸಿದರೆ ದಂಡದ ಮೊತ್ತವನ್ನು ದ್ವಿಗುಣಗೊಳಿಸಲಾಗುತ್ತದೆ. ಮೊದಲ ಬಾರಿಗೆ ಓವರ್ ಲೋಡ್ ವಾಹನಗಳಿಗೆ 20,000 ರೂ. ಎರಡನೇ ಬಾರಿ ದಂಡ ದ್ವಿಗುಣ ತೆರಬೇಕಾಗುತ್ತದೆ.

ಇನ್ನು ಮೊದಲ ಬಾರಿಗೆ ಕೆಂಪು ದೀಪ ಹಾರಿ ಅಥವಾ ಟ್ರಿಪಲ್ ರೈಡಿಂಗ್ ಮಾಡಿದರೆ ರೂ 1,000 ದಂಡ ವಿಧಿಸಲಾಗುತ್ತದೆ. ಮತ್ತೆ ನಿಯಮ ಉಲ್ಲಂಘಿಸಿದರೆ ದುಪ್ಪಟ್ಟು ದಂಡ ತೆರಬೇಕಾಗುತ್ತದೆ. ಸಂಚಾರ ನಿಯಮಗಳ ಉಲ್ಲಂಘನೆಯನ್ನು ತಡೆಗಟ್ಟಲು ಮತ್ತು ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲು ಪಂಜಾಬ್ ಪೊಲೀಸರು ಸಂಚಾರ ತಡೆಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!