ಇಂದಿನ ಆಧುನಿಕ ಯುಗದಲ್ಲಿ ಬಹುತೇಕರಿಗೆ ಸ್ಥೂಲಕಾಯತೆ ಸಮಸ್ಯೆ ಕಾಡುತ್ತಿದೆ. ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಸ್ಥೂಲಕಾಯತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆಹಾರ ಪದ್ಧತಿಯ ಮೇಲೆ ನಿಯಂತ್ರಣ ಇಲ್ಲದಿರುವುದೇ ಇದಕ್ಕೆ ಕಾರಣವಾಗಿದೆ. ಆಹಾರದಲ್ಲಿ ಒಳ್ಳೆಣ್ಣೆ ಸೇರಿಸಿದ್ರೆ ಎಷ್ಟೆಲ್ಲಾ ಲಾಭ ನೋಡಿ..
ಆಯುರ್ವೇದದಲ್ಲಿ ಎಳ್ಳೆಣ್ಣೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಎಳ್ಳಿನಲ್ಲಿ ಔಷಧೀಯ ಗುಣಗಳು ಇರುವುದರಿಂದಾಗಿ, ಇದನ್ನು ವಿವಿಧ ರೀತಿಯ ಸೌಂದರ್ಯ ವರ್ಧಕ ಉತ್ಪನ್ನಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಎಳ್ಳೆಣ್ಣೆಯನ್ನು ಹೊಂದಿರುವ ಸೌಂದರ್ಯ ವರ್ಧಕಗಳು ನಮ್ಮ ಚರ್ಮಕ್ಕೆ ತೇವಾಂಶವನ್ನು ಕಾಯ್ದುಕೊಳ್ಳಲು ಮಾತ್ರವಲ್ಲದೆ ಚರ್ಮದಲ್ಲಿ ಹೊಸ ಕೋಶಗಳನ್ನು ಸೃಷ್ಟಿಸುತ್ತವೆ. ಎಳ್ಳಿನ ಎಣ್ಣೆಯಲ್ಲಿ ವಯಸ್ಸಾಗುವುದನ್ನು ತಡೆಯುವ ಗುಣಗಳು ನೈಸರ್ಗಿಕವಾಗಿ ಕಂಡುಬರುತ್ತವೆ.
ಕೂದಲು ಮತ್ತು ಉಗುರುಗಳಲ್ಲಿ ಕಾಣಿಸಿಕೊಳ್ಳುವ ಸಮಸ್ಯೆಗಳನ್ನು ಪರಿಹಾರ ಮಾಡುತ್ತದೆ. ಚಳಿಗಾಲದಲ್ಲಿ ಇದನ್ನು ಸೇವಿಸುವುದರಿಂದ ಖಂಡಿತವಾಗಿಯೂ ನೀವು ಫಿಟ್ ಆಗಿರುತ್ತೀರಿ. ಈ ಎಣ್ಣೆಯನ್ನು ನಿಮ್ಮ ಚಳಿಗಾಲದ ಆಹಾರದಲ್ಲಿ ನಿಯಮಿತವಾಗಿ ಬಳಕೆ ಮಾಡಬೇಕು.