ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಭಾರತದ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದು, “ಕರ್ನಾಟಕದ ಒಂದು ಸ್ಥಾನದಲ್ಲಿ ಚುನಾವಣಾ ಆಯೋಗ ವಂಚನೆ ಮಾಡಲು ಅವಕಾಶ ನೀಡಿದೆ ಎಂಬುದಕ್ಕೆ ಕಾಂಗ್ರೆಸ್ ಬಳಿ ಶೇ. 100ರಷ್ಟು ಪುರಾವೆ ಇದೆ” ಎಂದು ಹೇಳಿದ್ದಾರೆ.
“ಶೇ. 90 ಅಲ್ಲ ನಮ್ಮ ಬಳಿ ಇರುವುದು ಶೇ. 100ರಷ್ಟು ಪುರಾವೆಯಾಗಿದೆ. ಒಂದುವೇಳೆ ನೀವು ಇದರಿಂದ ತಪ್ಪಿಸಿಕೊಳ್ಳುತ್ತೀರಿ ಎಂದು ಭಾವಿಸಿದರೆ ಅದು ನಿಮ್ಮ ತಪ್ಪು ಕಲ್ಪನೆ. ನೀವು ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ನಾವು ನಿಮ್ಮ ಮೇಲೆ ಕಣ್ಣಿಟ್ಟಿದ್ದೇವೆ” ಎಂದು ರಾಹುಲ್ ಗಾಂಧಿ ಸಂದೇಶ ರವಾನಿಸಿದ್ದಾರೆ.
ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆಧಾರರಹಿತ ಆರೋಪಗಳನ್ನು ಮಾಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದೆ. ಒಂದುವೇಳೆ ಚುನಾವಣಾ ಅರ್ಜಿ ಸಲ್ಲಿಸಿದ್ದರೆ ಎಲ್ಲರೂ ಹೈಕೋರ್ಟ್‌ನ ತೀರ್ಪಿಗಾಗಿ ಕಾಯಬೇಕು ಎಂದು ಚುನಾವಣಾ ಆಯೋಗ ತಿರುಗೇಟು ನೀಡಿದೆ.