ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು BPL ಕಾರ್ಡ್ ದಾರರಿಗೆ ಶಾಕಿಂಗ್ ಸುದ್ದಿ ನೀಡಿದ್ದು, ಇನ್ಮುಂದೆ ಸ್ವಂತ ಕಾರು ಹೊಂದಿರುವವರು ಬಿಪಿಎಲ್ ಕಾರ್ಡ್ ಹೊಂದಿರೋದಕ್ಕೆ ಅರ್ಹರಲ್ಲ. ಹೀಗಾಗಿ ಅವರ ಕಾರ್ಡ್ ರದ್ದುಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ .
ಬೆಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಂತ ಕಾರು ಹೊಂದಿರೋರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ, ಹಿಂಪಡೆಯೋ ಚಿಂತನೆ ನಡೆಸಲಾಗಿದೆ. ವೈಟ್ ಬೋರ್ಡ್ ಕಾರು ಇರುವ ಬಿಪಿಎಲ್ ಪಡಿತರರದಾರರ ಕಾರ್ಡ್ ರದ್ದುಗೊಳಿಸಲಾಗುತ್ತದೆ. ಯೆಲ್ಲೋ ಬೋರ್ಡ್ ಹೊಂದಿರುವ ಕಾರು ಇಟ್ಟುಕೊಂಡಿರುವ ಬಿಪಿಎಲ್ ಕಾರ್ಡ್ ಗಳನ್ನು ಹಿಂಪಡೆಯುವಂತ ಚಿಂತನೆಯನ್ನು ನಡೆಸಲಾಗಿದೆ ಎಂದು ಹೇಳಿದರು.
ಅದೇ ರೀತಿ ರಾಜ್ಯದಲ್ಲಿ ಹೊಸದಾಗಿ ಪಡಿತರ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆಯ ಕಾರಣ ಕಾರ್ಡ್ ವಿತರಿಸಿರಲಿಲ್ಲ. ಈಗ ಹೊಸದಾಗಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಪಡಿತರ ಕಾರ್ಡ್ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿರೋದಾಗಿ ತಿಳಿಸಿದರು.