ಕೆಟ್ಟ ಪದ ಬಳಸಿಲ್ಲ ಅನ್ನೋದಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ: ಹೆಬ್ಬಾಳ್ಕರ್‌ ಸವಾಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಮಾಯಣ, ಮಹಾಭಾರತ ಆಗಿದ್ದು, ಮಹಿಳೆಯನ್ನ ಅಪಮಾನ ಮಾಡಿದ್ದಕ್ಕೆ. ಅಲ್ಲಿ ಅಪಮಾನ ಮಾಡಿದ ಎಲ್ಲರಿಗೂ ಶಿಕ್ಷೆ ಆಗಿದೆ. ಇಲ್ಲಿಯೂ ಆಗುತ್ತೆ. ಸಿ.ಟಿ ರವಿ ಅವರು ಆ ರೀತಿ ಹೇಳಿಲ್ಲ ಅನ್ನೋದಾದ್ರೆ, ಧರ್ಮಸ್ಥಳಕ್ಕೆ ಬಂದು ಆಣೆ, ಪ್ರಮಾಣ ಮಾಡಲಿ. ನಾನು ಬಂದು ಅವರು ಹೇಳಿದ್ದಾರೆ ಅಂತ ಆಣೆ ಮಾಡ್ತೇನೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಸಿ.ಟಿ ರವಿ ಈ ರೀತಿ ಅಂದಿದ್ದಾರೆ ಅಂತಾ ನಾನು ನಾಟಕ ಮಾಡೋದಕ್ಕೆ ಆಗುತ್ತಾ? ಸದನದಲ್ಲಿ ನಿಂತು ಸುಳ್ಳು ಆರೋಪ ಮಾಡೋದಕ್ಕೆ ಆಗುತ್ತಾ? ಸುಳ್ಳು ಹೇಳೋದಕ್ಕೆ ನನಗೇನು ಹುಚ್ಚಾ? ನಾಟಕವಾಡಿ ರಾಜಕಾರಣದಲ್ಲಿ ನಾನು ಏನಾದ್ರೂ ಗಳಿಸೋದು ಇದ್ಯಾ? ಎಂದು ಪ್ರಶ್ನಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!