ಕಾಂಗ್ರೆಸ್‌ ಸರ್ಕಾರ ನೋಡಿದ್ರೆ ತುಘಲಕ್ ಆಡಳಿತ ನೆನಪಾಗುತ್ತೆ, ಭಗವಂತ ಖೂಬಾ ಈ ರೀತಿ ಹೇಳಿದ್ದು ಯಾಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ತುಘಲಕ್ ಆಡಳಿತವನ್ನು ಕಾಂಗ್ರೆಸ್ ಸರ್ಕಾರ ಮುಂದುವರಿಸಿದೆ. ಶಾಂತಿಯ ತೋಟದಂತೆ ಕಾಣುತ್ತಿದ್ದ ರಾಜ್ಯ ಅಶಾಂತಿಯ ನಾಡಾಗಿ ಪರಿವರ್ತನೆಗೊಂಡಿದೆ. ಕುಡಿಯುವ ನೀರಿನ ಅಭಾವದಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದೆ. ರಾಜಧಾನಿ ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ನಿವಾಸ ಕೃಷ್ಣಾಗೃಹದಲ್ಲಿ ನೀರಿನ ಕೊರತೆ ಉಂಟಾಗಿದೆ. ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂಬ ಘೋಷಣೆ ಹಾಕಿದ ವ್ಯಕ್ತಿಯ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಅವರಿಗೆ ನಾಚಿಕೆ ಆಗಬೇಕು ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನನ್ನ ಸಾಧನೆ ನೋಡಿ ಮತ್ತೊಮ್ಮೆ ಟಿಕೆಟ್‌ ನೀಡಿರುವುದಕ್ಕೆ ಬಹಳ ಸಂತಸವಾಗಿದೆ. ಶಾಸಕರಾದ ಶರಣು ಸಲಗರ, ಪ್ರಭು ಚವ್ಹಾಣ, ಡಾ.ಅವಿನಾಶ ಜಾಧವ್ ನನಗೆ ಬೆಂಬಲ ನೀಡಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!