ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಮುನಿರತ್ನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಮಗನಿಗೆ ಮುನಿರತ್ನ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ.
ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ ಹಚ್ಚುತ್ತೇವೆ. ನಿಮ್ಮ ವಂಶವೇ ಇಲ್ಲದಂತೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಸಾಕ್ಷಿಗಳ ಮನೆಗೆ ನುಗ್ಗಿ ನಿಮ್ಮ ವಂಶವೇ ಇರುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತೆ ಸುನಂದಮ್ಮ ಮತ್ತು ಶಾಸಕ ಮುನಿರತ್ನ ಬೆಂಬಲಿಗರು ಬೆದರಿಕೆ ಹಾಕಿದ್ದು, ಈ ಕುರಿತಾಗಿ ಯಶವಂತಪುರ ಠಾಣೆಗೆ ದೂರು ನೀಡಲಾಗಿದೆ.