ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ: ಸೇಡಿನ ರಾಜಕಾರಣ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್; 

ರಾಜ್ಯದಲ್ಲಿ ವೈಷಮ್ಯದ ರಾಜಕಾರಣ ಮಾಡುವವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ‘ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ!

ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ.. ಇದೂ ಒಂದು ಬದುಕೇ..? ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನಡೆಗೆ ನಾಲಿಗೆ ಚಾಚಿದೆ! ಇಂಥ ಕ್ರಿಮಿನಲ್ ಒಬ್ಬ ಕೆಟ್ಟ ಅಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ಕ್ರಿಮಿನಲ್’ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು.. ಇದರಲ್ಲಿ ನನಗೇನೂ ಅಚ್ಚರಿ ಇಲ್ಲ. ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನವಾಗುತ್ತದೆ. ಈಗ ನನ್ನ ಮರ್ಯಾದೆ ವಿಷಯ ಇರಲಿ, ಇವತ್ತು ಸ್ವಪಕ್ಷೀಯರೇ ಈ ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಹಾಕಿದ್ದಾರೆ! ಅದಕ್ಕೆ ಉತ್ತರವೇನು?’ ಎಂದು ಆಕ್ರೋಶ ಹೊರಹಾಕಿದ್ದಾರೆ.

https://x.com/hd_kumaraswamy/status/1902717167789064560

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!