ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದರೆ ಮತ್ತೆ ವಿದ್ಯುತ್ ಕಡಿತವನ್ನು ಎದುರಿಸಬೇಕಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಮತದಾರರಿಗೆ ಎಚ್ಚರಿಕೆ ನೀಡಿದ್ದಾರೆ.
ದೆಹಲಿಯ ವಿಕಾಸಪುರಿಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿ, ದೆಹಲಿಯಲ್ಲಿ ವಿದ್ಯುತ್ ಉಚಿತವಾಗಿದೆ. ಆದರೆ (ದೆಹಲಿ ಜನರು) ಬಿಜೆಪಿಗೆ ಮತ ಹಾಕಿದರೆ ನೀವು ಮತ್ತೊಮ್ಮೆ ವಿದ್ಯುತ್ ಕಡಿತವನ್ನು ಎದುರಿಸುತ್ತೀರಿ. ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಈಗಾಗಲೇ 8 ರಿಂದ 10 ಗಂಟೆಗಳ ಕಾಲ ವಿದ್ಯುತ್ ಕಡಿತಗೊಳಸಲಾಗುತ್ತಿದೆ. ಜತೆಗೆ ಉತ್ತರಪ್ರದೇಶ, ರಾಜಸ್ಥಾನ ಮತ್ತು ಬಿಹಾರದಲ್ಲಿ ವಿದ್ಯುತ್ ಬಿಲ್ ತುಂಬಾ ದುಬಾರಿಯಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಕೆಲವರು ನೀರಿನ ಬಿಲ್ ಹೆಚ್ಚುತ್ತಿದೆ ಎಂದು ಕೇಳಿದ್ದಕ್ಕೆ ನೀವು ಚಿಂತಿಸಬೇಡಿ, ನನಗೆ ಮತ ನೀಡಿ-ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ, ನಿಮ್ಮ ಎಲ್ಲಾ ನೀರಿನ ಬಿಲ್‌ಗಳನ್ನು ನಾನು ಮನ್ನಾ ಮಾಡುತ್ತೇನೆ ಎಂದು ಕೇಜ್ರಿವಾಲ್ ಭರವಸೆ ನೀಡಿದರು.
ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ ತನ್ನ ತಯಾರಿಯನ್ನು ತೀವ್ರಗೊಳಿಸಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿರುವ ಅರವಿಂದ್ ಕೇಜ್ರಿವಾಲ್ ನಗರದಾದ್ಯಂತ ಪ್ರಚಾರ ನಡೆಸುತ್ತಿದ್ದಾರೆ