ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಮಹಾನಗರದಲ್ಲಿ ಕಳೆದ ರಾತ್ರಿ ಸುರಿದ ಮಳೆಗೆ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಬೆಂಗಳೂರಿನ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಬೆಂಗಳೂರಿನ ರಸ್ತೆಗಳು ನದಿಯಂತಾಗಿವೆ. ಇದರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಈ ವಿಚಾರವಾಗಿ ಸಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದೆ. ಈ ವಿಡಿಯೋವನ್ನು ಎಐ ತಂತ್ರಜ್ಞಾನ ಸಹಾಯದಿಂದ ಎಡಿಟ್ ಮಾಡಲಾಗಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ಲೇ ಕಾರ್ಡ್ ಹಿಡಿದು ಸರ್ಫ್ ರೇಡ್ ಮಾಡುತ್ತಿರುವಂತೆ ಎಡಿಟ್ ಮಾಡಲಾಗಿದೆ. ಪ್ಲೇ ಕಾರ್ಡ್ನಲ್ಲಿ ಬ್ರ್ಯಾಂಡ್ ಬೆಂಗಳೂರು ಅಂತ ಬರೆಯಲಾಗಿದೆ.
View this post on Instagram